ADVERTISEMENT

ಮಂಗಳೂರು: ಮಹಿಳೆ ಮೇಲೆ ಹಲ್ಲೆ, ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 14:21 IST
Last Updated 15 ಜುಲೈ 2021, 14:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ನಗರದ ಯುನಿಸೆಕ್ಸ್ ಸಲೂನ್‌ನಲ್ಲಿ ಮಹಿಳೆಗೆ ಕಿರುಕುಳ ನೀಡಿ, ಹಲ್ಲೆ ಮತ್ತು ದರೋಡೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಬ್ದುಲ್ ದಾವೂದ್ ಬಂಧಿತ ಆರೋಪಿ. ಕೃತ್ಯದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜುಲೈ 1 ರಂದು ನಗರದ ಕದ್ರಿಯ ಸಲೂನ್‌ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ, ಹಲ್ಲೆ ಮಾಡಿದ್ದ ಅಬ್ದುಲ್ ದಾವೂದ್‌, ₹14ಸಾವಿರ ಕಿತ್ತುಕೊಂಡಿದ್ದ. ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಪ್ರಕರಣ ದಾಖಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.