ADVERTISEMENT

ಸಾರ್ವಜನಿಕರೊಂದಿಗೆ ಅನುಚಿತ ವರ್ತನೆ ಆರೋಪ: ಪೊಲೀಸರಿಗೊಪ್ಪಿಸಿದ ಸ್ಥಳೀಯರು

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2025, 5:34 IST
Last Updated 4 ಆಗಸ್ಟ್ 2025, 5:34 IST
ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಗಾಳಿಮುಖ ಪೇಟೆಯಲ್ಲಿ ಸಾರ್ವಜನಿಕರೊಂದಿಗೆ ಭಾನುವಾರ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಕೈಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದರು
ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಗಾಳಿಮುಖ ಪೇಟೆಯಲ್ಲಿ ಸಾರ್ವಜನಿಕರೊಂದಿಗೆ ಭಾನುವಾರ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಕೈಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದರು   

ಪುತ್ತೂರು (ದಕ್ಷಿಣ ಕನ್ನಡ): ಕರ್ನಾಟಕ– ಕೇರಳ ಗಡಿ ಪ್ರದೇಶದ, ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಭಾನುವಾರ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಜನರ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಹಿಡಿದು ಕೈಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ನಿಷೇಧಿತ ಮಾದಕ ವಸ್ತು ಸೇವಿಸಿ ಈ ರೀತಿ ವರ್ತಿಸುತ್ತಿದ್ದಾನೆ ಎಂಬ ಶಂಕೆಯಲ್ಲಿ ಸ್ಥಳೀಯರು ಹಗ್ಗದಿಂದ ಆತನ ಕೈ–ಕಾಲು ಕಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈಶ್ವರಮಂಗಲ ಹೊರ ಠಾಣೆ ಪೊಲೀಸರು ಬಂದು ಆತನನ್ನು ವಶಕ್ಕೆ ಪಡೆದುಕೊಂಡು, ಸಂಪ್ಯ ಠಾಣೆಗೆ ಕರೆದೊಯ್ದುರು. ಬಳಿಕ ವೈದ್ಯಕೀಯ ಪರೀಕ್ಷೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆತ ಕಾಸರಗೋಡಿನ ಮುಳ್ಳೇರಿಯದ ವ್ಯಕ್ತಿ ಎಂದು ಮಾಹಿತಿ ಲಭಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.