
ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಫೆ.14ರವರೆಗೆ ನಡೆಯುತ್ತಿರುವ ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನಾ ನೇಮಕಾತಿ ರ್‍ಯಾಲಿಯಲ್ಲಿ ಮೊದಲ ದಿನವಾದ ಶುಕ್ರವಾರ 539 ಅಭ್ಯರ್ಥಿಗಳು ಪಾಲ್ಗೊಂಡಿದ್ದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಸೇನಾ ನೇಮಕಾತಿ ರ್‍ಯಾಲಿಗೆ ಹಸಿರು ನಿಶಾನೆ ನೀಡಿದರು. ಮಂಗಳೂರು ವಿಭಾಗದ ಬ್ರಿಗೇಡಿಯರ್ ಎಸ್.ಕೆ.ಸಿಂಗ್, ನೇಮಕಾತಿ ವಿಭಾಗದ ಮುಖ್ಯಸ್ಥ ಜಿ.ಸೋಮು ಮಹಾರಾಜನ್, ಸೇನಾಧಿಕಾರಿಗಳು ಉಪಸ್ಥಿತರಿದ್ದರು.
ಮೊದಲ ದಿನ ಆಯ್ಕೆ ಪ್ರಕ್ರಿಯೆಲ್ಲಿ ವಿಜಯಪುರ ಜಿಲ್ಲೆಯ ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಒಂದೂವರೆ ಕಿ.ಮೀ ನಡಿಗೆ, ಅಡೆತಡೆ ಓಟ, ಎತ್ತರ ಜಿಗಿತ, ದೈಹಿಕ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆಗಳು ನಡೆದವು. ಶನಿವಾರ ವೈದ್ಯಕೀಯ ಪರೀಕ್ಷೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.