ಪ್ರಾತಿನಿಧಿಕ ಚಿತ್ರ
ಉಳ್ಳಾಲ: ಪುಣ್ಯಕೋಟಿನಗರ ಕೈರಂಗಳದ ಶಾರದಾ ಗಣಪತಿ ವಿದ್ಯಾಕೇಂದ್ರ ಆಯೋಜಿಸುವ ರಾಜ್ಯಮಟ್ಟದ ಶಿಕ್ಷಣ, ಉದ್ಯೋಗ, ಕೃಷಿ ಮೇಳ ಡಿ. 6, 7 ಮತ್ತು 8 ರಂದು ನಡೆಯಲಿದೆ.
ಉದ್ಯೋಗಾಕಾಂಕ್ಷಿಗಳು, ಕೃಷಿಕರು, ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು ಎಂದು ಕೃಷಿ ಮೇಳದ ಸಂಚಾಲಕ ಅಧ್ಯಕ್ಷ ಟಿ.ಜಿ.ರಾಜಾರಾಮ್ ಭಟ್ ಹೇಳಿದರು.
ತೊಕ್ಕೊಟ್ಟುವಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪದವೀಧರ ನಿರುದ್ಯೋಗಿಗಳಿಗಾಗಿ ಉದ್ಯೋಗ ಮೇಳಆಯೋಜಿಸಲಾಗಿದೆ. ಪ್ರಮುಖ ಐಟಿ ಕಂಪನಿಗಳು ಮೇಳದಲ್ಲಿ ಭಾಗವಹಿಸಲಿವೆ. ಕೃಷಿ ಯಂತ್ರೋಪಕರಣ, ಸಾವಯವ ಗೊಬ್ಬರ, ಬೀಜ, ಸಸಿಗಳ ಮಾರಾಟವೂ ಇರಲಿದೆ. 306 ಮಳಿಗೆಗಳು ಮೇಳದಲ್ಲಿ ಇರಲಿವೆ. ಯಕ್ಷಗಾನ, ಹಾಸ್ಯ, ನೃತ್ಯ ಸೇರಿದಂತೆ ಮೂರು ದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ’ ಎಂದರು.
ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ ಕಂಬ್ಳಪದವು, ಕಾರ್ಯದರ್ಶಿ ನವೀನ್ ಪಾದಲ್ಪಾಡಿ, ಜತೆ ಕಾರ್ಯದರ್ಶಿ ವಿಶ್ವನಾಥ್ ಕಡ್ವಾಯಿ, ರಂಜಿತ್ ಮಿತ್ತಾವು ಸುದ್ದಿಗೋಷ್ಠಿಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.