ADVERTISEMENT

ಜನವರಿ 8ಕ್ಕೆ ಕಾರ್ಮಿಕರ ಮುಷ್ಕರ

ದೇಶದಲ್ಲಿ ತುಕಡೆ ಗ್ಯಾಂಗ್ ಆಡಳಿತ: ಅಮರಜೀತ್ ಕೌರ್‌

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2019, 20:01 IST
Last Updated 14 ಡಿಸೆಂಬರ್ 2019, 20:01 IST
ಅಮರಜೀತ್ ಕೌರ್‌
ಅಮರಜೀತ್ ಕೌರ್‌   

ಮಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಜನವರಿ 8ರಂದು ದೇಶದ ವಿವಿಧ ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿವೆ ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಮರಜೀತ್ ಕೌರ್‌ ತಿಳಿಸಿದರು.

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮುಷ್ಕರದಲ್ಲಿ 25 ಕೋಟಿ ಜನರು ಭಾಗವಹಿಸಲಿದ್ದಾರೆ ಎಂದರು.

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯಿಂದಾಗಿ ಕಾರ್ಮಿಕರು ಬೀದಿಪಾಲಾಗುತ್ತಿದ್ದಾರೆ. ಕಾರ್ಮಿಕ ಸಂಘಟನೆಗಳ ವಿರೋಧದ ನಡುವೆಯೇ 44 ಕಾರ್ಮಿಕ ಕಾನೂನುಗಳನ್ನು ಒಟ್ಟು ಸೇರಿಸಿ, 4 ಕಾನೂನುಗಳಾಗಿ ಮಾಡಿ ಸೌಲಭ್ಯಗಳನ್ನು ಕಸಿದುಕೊಂಡಿದೆ ಎಂದು ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.