ADVERTISEMENT

ಪಾಲಿಕೆಯಿಂದ ಸಂಭ್ರಮದ ನಡಿಗೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2022, 3:01 IST
Last Updated 13 ಆಗಸ್ಟ್ 2022, 3:01 IST
ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಶುಕ್ರವಾರ ಸಂಭ್ರಮದ ನಡಿಗೆ ನಡೆಯಿತು.
ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಶುಕ್ರವಾರ ಸಂಭ್ರಮದ ನಡಿಗೆ ನಡೆಯಿತು.   

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸಂಭ್ರಮದ ನಡಿಗೆ ಶುಕ್ರವಾರ ನಡೆಯಿತು.

ಮಹಾನಗರಪಾಲಿಕೆ ಕಚೇರಿಯಿಂದ ಹೊರಟ ಮೆರವಣಿಗೆ ಲಾಲ್‌ಬಾಗ್ ವೃತ್ತ, ಬ್ರಹ್ಮಶ್ರೀ ನಾರಾಯಣ ಗುರು ವೃತ್ತವಾಗಿ ಮಣ್ಣಗುಡ್ಡೆ ಕೆನರಾ ಉರ್ವ ಶಾಲೆ ರಸ್ತೆ ಮೂಲಕ ಪಾಲಿಕೆಗೆ ಬಂದು ಸಮಾರೋಪಗೊಂಡಿತು.ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಳಾ ರಾವ್, ಮುಖ್ಯ ಸಚೇತಕ ಸುಧೀರ್ ಶೆಟ್ಟಿ, ಪಾಲಿಕೆಯ ಸದಸ್ಯರು, ಆಯುಕ್ತ ಅಕ್ಷಯ್ ಶ್ರೀಧರ್, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪಾಲಿಕೆ ವತಿಯಿಂದ ಪಿಎಂ ಸ್ವನಿಧಿ ಯೋಜನೆಯಡಿ ಇಬ್ಬರು ಸಾರ್ವಜನಿಕರಿಗೆ ಧನಸಹಾಯದ ಚೆಕ್ ಹಸ್ತಾಂತರಿಸಲಾಯಿತು. ನಗರದ ಸ್ವಚ್ಛತಾ ಕಾರ್ಯ ನಡೆಸುವ ಪೌರ ಕಾರ್ಮಿಕರಿಗೆ ಮುಖ್ಯಮಂತಿ ಹಸ್ತಾಕ್ಷರ ಇರುವ ಪ್ರಶಂಸನಾ ಪತ್ರ ನೀಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.