ADVERTISEMENT

ಮಂಗಳೂರು | ‘ಆಳ್ವಾಸ್ ಪ್ರಗತಿ’: 16 ಸಾವಿರ ಉದ್ಯೋಗಾವಕಾಶ

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 18:48 IST
Last Updated 25 ಜುಲೈ 2025, 18:48 IST
ವಿವೇಕ್ ಆಳ್ವ
ವಿವೇಕ್ ಆಳ್ವ   

ಮಂಗಳೂರು: ‘ಆಳ್ವಾಸ್ ಪ್ರಗತಿ’ 15ನೇ ಆವೃತ್ತಿಯ ಉದ್ಯೋಗ ಮೇಳವು ಆಗಸ್ಟ್ 1 ಹಾಗೂ 2ರಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಕ್ಯಾಂಪಸ್‌ನಲ್ಲಿ ನಡೆಯಲಿದೆ. ವಿವಿಧ ವಲಯಗಳ 300ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, 15,900ಕ್ಕೂ ಅಧಿಕ ಉದ್ಯೋಗಾವಕಾಶಗಳು ತೆರೆದುಕೊಂಡಿವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಮಾನ್ಯುಫ್ಯಾಕ್ಚರಿಂಗ್, ಲಾಜಿಸ್ಟಿಕ್ಸ್, ಐಟಿ, ಐಟಿಇಎಸ್, ಬ್ಯಾಂಕಿಂಗ್ ಹಾಗೂ ಹಣಕಾಸು, ಹೆಲ್ತ್‌ಕೇರ್, ಫಾರ್ಮಾ, ಮಾಧ್ಯಮ, ಮಾರಾಟ ಮತ್ತು ಚಿಲ್ಲರೆ, ಆತಿಥ್ಯ ವಲಯಗಳ ಪ್ರಮುಖ ಕಂಪನಿಗಳು ಈಗಾಗಲೇ ನೋಂದಣಿ ಮಾಡಿಕೊಂಡಿವೆ’ ಎಂದರು.

ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬರುವವರಿಗೆ ಜುಲೈ 31ರಿಂದ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನೋಂದಣಿ ಹಾಗೂ ಪಾಲ್ಗೊಳ್ಳುವ ಕಂಪನಿಗಳ ವಿವರಕ್ಕೆ www.alvaspragati.com ಈ ತಾಣಕ್ಕೆ ಭೇಟಿ ನೀಡಬಹುದು ಎಂದು ಹೇಳಿದರು. ಮಾಹಿತಿಗೆ ಸಂಪರ್ಕ ಸಂಖ್ಯೆ: 9741440490, 7975223865.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.