
ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 2026- 27ನೇ ಸಾಲಿಗೆ 6 ರಿಂದ 9ನೇ ತರಗತಿಯ ಉಚಿತ ಶಿಕ್ಷಣ ಸೌಲಭ್ಯದಡಿ ಪ್ರವೇಶಕ್ಕಾಗಿ ಭಾನುವಾರ ನಡೆದ ಪ್ರವೇಶ ಪರೀಕ್ಷೆಗೆ ವಿವಿಧ ಜಿಲ್ಲೆಗಳಿಂದ 20,146 ವಿದ್ಯಾರ್ಥಿಗಳು ಹಾಜರಾದರು.
6ನೇ ತರಗತಿಗೆ 16,014, 7ನೇ ತರಗತಿಗೆ 1,374, 8ನೇ ತರಗತಿಗೆ 1,983 ಹಾಗೂ 9ನೇ ತರಗತಿಗೆ ಪ್ರವೇಶ ಬಯಸಿ 775 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಇವರಲ್ಲಿ ಬೆಳಗಾವಿ ಜಿಲ್ಲೆಯ 7,353, ಬಾಗಲಕೋಟೆ ಜಿಲ್ಲೆಯ 4,080 ಹಾಗೂ ವಿಜಯಪುರ ಜಿಲ್ಲೆಯ 2,961 ವಿದ್ಯಾರ್ಥಿಗಳಿದ್ದರು.
ಅರ್ಜಿಯನ್ನು ಸಲ್ಲಿಸಲು ಕ್ಯು ಆರ್ ಕೋಡ್ ಸಹಿತವಾಗಿ ಆನ್‌ಲೈನ್‌ನಲ್ಲಿ ವ್ಯವಸ್ಥೆ ಮಾಡಲಾಗಿತ್ತು. 5 ಕೇಂದ್ರಗಳಲ್ಲಿ ಪರೀಕ್ಷೆ ನಡೆದವು.
ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ಸೌಲಭ್ಯದಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಿಕ್ಷಣ ಶುಲ್ಕ, ವಿದ್ಯಾರ್ಥಿನಿಲಯ, ಪಠ್ಯಪುಸ್ತಕ ಉಚಿತವಾಗಿ ನೀಡಲಾಗುತ್ತದೆ. ಸದ್ಯ ಕನ್ನಡ ಮಾಧ್ಯಮ ಶಾಲೆಯಲ್ಲಿ 6ರಿಂದ 10ನೇ ತರಗತಿಯವರೆಗೆ 750ಕ್ಕೂ ಅಧಿಕ ಮಕ್ಕಳು ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.