ADVERTISEMENT

ಆಳ್ವಾಸ್ ನುಡಿಸಿರಿ ಸಮ್ಮೇಳನ ತಾತ್ಕಾಲಿಕ ಮುಂದೂಡಿಕೆ 

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮಾಹಿತಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2022, 13:23 IST
Last Updated 3 ಅಕ್ಟೋಬರ್ 2022, 13:23 IST
ಡಾ.ಎಂ.ಮೋಹನ ಆಳ್ವ
ಡಾ.ಎಂ.ಮೋಹನ ಆಳ್ವ   

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಡಿ.21ರಿಂದ 23ರವರೆಗೆ ನಡೆಸಲು ಉದ್ದೇಶಿಸಿದ್ದ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ-2022’ ಅನ್ನು ಅನಿವಾರ್ಯ ಕಾರಣದಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.21ರಿಂದ 27ರ ವರೆಗೆ ನಡೆಸಲು ಉದ್ದೇಶಿಸಿರುವ ‘ಸ್ಕೌಟ್ಸ್ ಗೈಡ್ಸ್ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ’ಯು 50 ಸಾವಿರ ಪ್ರತಿನಿಧಿಗಳು ಮತ್ತು 10 ಸಾವಿರ ಅಧಿಕಾರಿಗಳೊಂದಿಗೆ ನಮ್ಮ ನಿರೀಕ್ಷೆಯನ್ನೂ ಮೀರಿ ವಿಸ್ತಾರಗೊಳ್ಳುತ್ತಿದ್ದು, ಈ ಎರಡು ಕಾರ್ಯಕ್ರಮಗಳನ್ನು ಏಕಕಾಲದಲ್ಲಿ ನಿರ್ವಹಿಸಲು ಮತ್ತು ವ್ಯವಸ್ಥೆಗೊಳಿಸಲು ಕಷ್ಟವಾಗುವುದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT