
ಪ್ರಜಾವಾಣಿ ವಾರ್ತೆ
ಮೂಡುಬಿದಿರೆ: ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿ.ವಿ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರಕಾಲೇಜು ಪುರುಷರ ಮತ್ತು ಮಹಿಳೆಯರ ಅಂತರಕಾಲೇಜು ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಆಳ್ವಾಸ್ ಕಾಲೇಜು 20ನೇ ಬಾರಿ ಸಮಗ್ರ ತಂಡ ಪ್ರಶಸ್ತಿ ಗೆದ್ದುಕೊಂಡಿದೆ.
ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜು 27 ಅಂಕವನ್ನು ಪಡೆದು ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು 56 ಅಂಕದೊಂದಿಗೆ ತಂಡ ಪ್ರಶಸ್ತಿಯನ್ನು ಪಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.