ADVERTISEMENT

ಮೂಡುಬಿದಿರೆ | ಆಳ್ವಾಸ್ ಪ್ರಗತಿ: 12,732 ಮಂದಿ ಭಾಗಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 17:42 IST
Last Updated 1 ಆಗಸ್ಟ್ 2025, 17:42 IST
ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಶುಕ್ರವಾರ ಆರಂಭಗೊಂಡ ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ಉದ್ಯೋಗಾಕಾಂಕ್ಷಿಗಳು
ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಶುಕ್ರವಾರ ಆರಂಭಗೊಂಡ ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ಉದ್ಯೋಗಾಕಾಂಕ್ಷಿಗಳು   

ಮೂಡುಬಿದಿರೆ (ದಕ್ಷಿಣ ಕನ್ನಡ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಇಲ್ಲಿನ ವಿದ್ಯಾಗಿರಿಯಲ್ಲಿ ಏರ್ಪಡಿಸಿರುವ 15ನೇ ಆವೃತ್ತಿಯ 3 ದಿನದಗ ಳ ಆಳ್ವಾಸ್ ಪ್ರಗತಿ ಉದ್ಯೋಗ ಮೇಳಕ್ಕೆ ಶುಕ್ರವಾರ ಚಾಲನೆ ದೊರೆಯಿತು.

ಮೊದಲ ದಿನ 12,732 ಉದ್ಯೋಗಾಕಾಂಕ್ಷಿಗಳು, 285 ಕಂಪನಿಗಳು ಪಾಲ್ಗೊಂಡಿದ್ದವು. 11,509 ಉದ್ಯೋಗಾಕಾಂಕ್ಷಿಗಳು ಆನ್‌ಲೈನ್ ಮೂಲಕ ನೋಂದಾಯಿಸಿಕೊಂಡಿದ್ದರು. ‌2,307 ಮಂದಿ ಸ್ಥಳದಲ್ಲೇ ಹೆಸರು ನೋಂದಾಯಿಸಿಕೊಂಡರು. ಕಂಪನಿಗಳು ಸಂದರ್ಶನ ನಡೆಸಿ ಆಯ್ಕೆ ಮಾಡಿದ ಅಭ್ಯರ್ಥಿಗಳ ಅಂತಿಮ ವಿವರಗಳನ್ನು ಶನಿವಾರ ಪ್ರಕಟಿಸಲಿವೆ.

ಉದ್ಯೋಗ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನಿಡಿದರು.

ADVERTISEMENT

ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರು, 2007ರಲ್ಲಿ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಆರಂಭವಾಗಿದ್ದು, ಈವರೆಗೆ ಸುಮಾರು 36 ಸಾವಿರ ಅಭ್ಯರ್ಥಿಗಳು ಉದ್ಯೋಗ ಪಡೆದಿದಿದ್ದಾರೆ. ಮೇಳ ಸಂಪೂರ್ಣ ಉಚಿತವಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.