
ಪ್ರಜಾವಾಣಿ ವಾರ್ತೆ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನಾಲ್ವರು ಕ್ರೀಡಾಪಟುಗಳು ಅಂತರರಾಷ್ಟ್ರೀಯ ಮಟ್ಟದ ಬಾಲ್‌ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಬಿಹಾರದ ಪಾಟ್ನಾದಲ್ಲಿ ಡಿ.27ರಿಂದ 29ರವರೆಗೆ ನಡೆದ ದಕ್ಷಿಣ ಏಷ್ಯಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಆಳ್ವಾಸ್ ಕಾಲೇಜಿನ ಜಯಲಕ್ಷ್ಮಿ ಭಾರತ ಮಹಿಳಾ ತಂಡದ ನಾಯಕಿಯಾಗಿ ತಂಡವನ್ನು ಗೆಲ್ಲಿಸಿಕೊಟ್ಟಿದ್ದರು. ಆತಿಥೇಯ ಭಾರತವಲ್ಲದೆ ನೇಪಾಳ, ಶ್ರೀಲಂಕಾ ಹಾಗೂ ಭೂತಾನ್ ತಂಡಗಳು ಈ ಟೂರ್ನಿಯಲ್ಲಿದ್ದವು.
ಜ.1ರಿಂದ 5ರವರೆಗೆ ನೇಪಾಳದ ಖಠ್ಮಂಡುವಿನಲ್ಲಿ ನಡೆಯುವ ಇಂಡೋ-ನೇಪಾಳ ಬಾಲ್ ಬ್ಯಾಡ್ಮಿಂಟನ್ ಟೆಸ್ಟ್ ಸರಣಿಗೆ ಆಳ್ವಾಸ್ ಪ್ರತಿಷ್ಠಾನದ ವಿದ್ಯಾರ್ಥಿಗಳಾದ ಪ್ರಶಾಂತ್ ಎಚ್.ಜಿ., ಸಾವಿತ್ರಿ ರಮೇಶ್ ಕರಿಗಾರ್ ಮತ್ತು ಲಾಂಛನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.