ADVERTISEMENT

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಪ್ರವೇಶ ಪರೀಕ್ಷೆ  ಇಂದು

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 1:57 IST
Last Updated 22 ಫೆಬ್ರುವರಿ 2026, 1:57 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆ ವತಿಯಿಂದ ಕನ್ನಡ ಮಾಧ್ಯಮ ಶಾಲೆಗೆ ಉಚಿತ ದಾಖಲಾತಿ ಬಯಸುವ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಉಚಿತ ಪ್ರವೇಶ ಪರೀಕ್ಷೆ  ಭಾನುವಾರ ಪುತ್ತಿಗೆಯ ವಿವೇಕಾನಂದ ನಗರದ ಐದು ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ.

ಈಗಾಲೇ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಒಟ್ಟು 22,874 ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 6 ರಿಂದ 10ನೇ ತರಗತಿಯವರೆಗೆ ಉಚಿತ ವಸತಿ, ಊಟೋಪಚಾರ ಸಹಿತ ಉಚಿತ ಶಿಕ್ಷಣವನ್ನು ನೀಡಲಾಗುವುದು. ಪರೀಕ್ಷೆಯ ಅವಧಿ 2-30 ಗಂಟೆ ಆಗಿದ್ದು, 150 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಯೋಧರ ಮಕ್ಕ‌ಳು, ಅನಾಥ ಮಕ್ಕಳು ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಪ್ರವೇಶಾತಿಯಲ್ಲಿ ಆದ್ಯತೆ ನೀಡಲಾಗುವುದು. ಕಳೆದ 18 ವರ್ಷಗಳಿಂದ ಈ ಪರೀಕ್ಷೆಯನ್ನು ಸಂಸ್ಥೆ ನಡೆಸುತ್ತಾ ಬಂದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.