ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಸೋರಿಕೆ
ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಸೋರಿಕೆಯಿಂದಾಗಿ 25ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ ಗೊಂಡಿದ್ದರು.
ಅವರಲ್ಲಿ ಸದ್ಯ ಇಬ್ಬರು ಆಸ್ಪತ್ರೆಯ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಒಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುರುವಾರ ಸಂಜೆ ಬೈಕಂಪಾಡಿಯ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಸೋರಿಕೆ ಆಗಿತ್ತು. 25ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥಗೊಂಡಿದ್ದರು. ಅವರಲ್ಲಿ ಏಳು ಜನರನ್ನು ಮುಕ್ಕದ ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿತ್ತು. ನಾಲ್ವರು ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇನ್ನಿಬ್ಬರು ಸಂಜೆ ವೇಳೆ ಆಸ್ಪತ್ರೆಯಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಫ್ಯಾಕ್ಟರಿ, ಬಾಯ್ಲರ್ಸ್ ಇಲಾಖೆಯ ಮೂಲಗಳು ತಿಳಿಸಿವೆ.
ಪೈಪ್ ಲೈನ್‌ಗೆ ಹಾನಿಯಾಗಿ ಈ ಅವಘಡ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ಎಲ್ಲ ಆಯಾಮಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದ್ದು, ವರದಿ ಬಂದ ನಂತರ ಫ್ಯಾಕ್ಟರಿ ಕಾಯ್ದೆ ಪ್ರಕಾರ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.