ADVERTISEMENT

ಅಂಡಿಂಜೆ: ‘ಗಾಂಧಿ ಗ್ರಾಮ ಪುರಸ್ಕಾರ’

ತೆರಿಗೆ ವಸೂಲಿಯಲ್ಲಿ ಶೇ 99 ಸಾಧನೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 2:31 IST
Last Updated 2 ಅಕ್ಟೋಬರ್ 2020, 2:31 IST
ಅಂಡಿಂಜೆ ಗ್ರಾಮ ಪಂಚಾಯಿತಿ
ಅಂಡಿಂಜೆ ಗ್ರಾಮ ಪಂಚಾಯಿತಿ   

ಬೆಳ್ತಂಗಡಿ: ಸ್ವಚ್ಛತೆ, ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪ್ರಗತಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿರುವ ಸಾಧನೆಯನ್ನು ಪರಿಗಣಿಸಿ ಅಂಡಿಂಜೆ ಗ್ರಾಮ ಪಂಚಾಯಿತಿಯನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಗ್ರಾಮ ಪಂಚಾಯಿತಿ ತೆರಿಗೆ ವಸೂಲಾತಿಯಲ್ಲಿ ಶೇ 99 ಅಂಕ ಗಳಿಸಿದೆ. ಸ್ವಂತ ಸಂಪನ್ಮೂಲ ಕ್ರಿಯಾ ಯೋಜನೆಯ ಅನುದಾನದಲ್ಲಿ ರಸ್ತೆ ದುರಸ್ತಿ, ಪೈಪ್‌ಲೈನ್ ಅಳವಡಿಕೆ, ಕೊಳವೆ ಬಾವಿ ರಚನೆ, ರುದ್ರಭೂಮಿಗೆ ಶೌಚಾಲಯ ಹಾಗೂ ಸ್ನಾನಗೃಹ ನಿರ್ಮಾಣ ಮಾಡಲಾಗಿದೆ.

ಪರಿಶಿಷ್ಟ ಜಾತಿ, ಪಂಗಡದ ಕುಟುಂಬಗಳ ಶ್ರೇಯೋಭಿವೃದ್ಧಿಗೆ ವೈದ್ಯಕೀಯ ವೆಚ್ಚ, ವಿವಾಹದ ಬಾಬ್ತು, ಕಂಪ್ಯೂಟರ್ ತರಬೇತಿ, ಪ್ಯಾರಾ ಮೆಡಿಕಲ್ ತರಬೇತಿ ನೀಡಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಬೇಡಿಕೆ ಸಲ್ಲಿಸಿದ ಕುಟುಂಬಗಳಿಗೆ ಉದ್ಯೋಗ ಚೀಟಿ ನೀಡಿ, ಬೇಡಿಕೆ ಸಲ್ಲಿಸಿದ 15 ದಿನಗಳೊಳಗೆ ಉದ್ಯೋಗ ನೀಡುವಲ್ಲಿ ಸಾಧನೆ ಮಾಡಿದೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಒಟ್ಟು 738 ಪುರುಷರು ಮತ್ತು 664 ಮಹಿಳೆಯರು ಭಾಗಿಯಾಗಿದ್ದಾರೆ.

ADVERTISEMENT

ಆಡಳಿತ ಮಂಡಳಿಯ ಪ್ರೇರೇಪಣೆ, ಸಾರ್ವಜನಿಕರ ಸಹಕಾರ ಹಾಗೂ ಸಿಬ್ಬಂದಿ ಕರ್ತವ್ಯ ಪ್ರಜ್ಞೆಯಿಂದ ಗಾಂಧಿ ಪುರಸ್ಕಾರ ಪಡೆಯಲು ಸಾಧ್ಯವಾಯಿತು ಎಂದು ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ ಪ್ರತಿಕ್ರಿಯಿಸಿದ್ದಾರೆ.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಯುವಕ ಮಂಡಲದ ಸಹಭಾಗಿತ್ವದಲ್ಲಿ ಸಮುದಾಯ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಒಟ್ಟು 4773 ಜನಸಂಖ್ಯೆ ಇರುವ ಅಂಡಿಂಜೆ ಗ್ರಾಮ ಪಂಚಾಯಿತಿ ಬಯಲು ಬಹಿರ್ದೆಸೆ ಮುಕ್ತ ಗ್ರಾಮವಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.