ADVERTISEMENT

ಮಂಗಳೂರು ವಿಶ್ವವಿದ್ಯಾಲಯದ ಘಟಿಕೋತ್ಸವ ಏ.10ಕ್ಕೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2021, 10:41 IST
Last Updated 8 ಏಪ್ರಿಲ್ 2021, 10:41 IST

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ 39ನೇ ಘಟಿಕೋತ್ಸವ ಏ.10 ರಂದು ಮಂಗಳಗಂಗೊತ್ರಿ ಆವರಣದಲ್ಲಿ ನಡೆಯಲಿದೆ.

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ವರ್ಚುವಲ್ ವೇದಿಕೆ ಮೂಲಕ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅಧ್ಯಕ್ಷತೆ ವಹಿಸುವರು ಎಂದು ಕುಲಪತಿ ಪ್ರೊ.ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈ ಬಾರಿ ಯಾರಿಗೂ ಗೌರವ ಡಾಕ್ಟರೇಟ್ ಹಾಗೂ ಡಿ.ಲಿಟ್ ಇಲ್ಲ. 117 ಮಂದಿಗೆ ಪಿಎಚ್.ಡಿ, 10 ಚಿನ್ನದ ಪದಕ, 101 ನಗದು ಬಹುಮಾನ, 188 ಮಂದಿ ರ‍್ಯಾಂಕ್‌ ಪಡೆಯಲಿದ್ದಾರೆ. ಈ ಬಾರಿ 43,743 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 33,806 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್. ಧರ್ಮಾ ಹೇಳಿದರು.

ADVERTISEMENT

ಕೋವಿಡ್-19 ಕಾರಣ ಸೀಮಿತ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಪಿಎಚ್.ಡಿ ಪಡೆದವರಲ್ಲಿ 14 ಮಂದಿ ವಿದೇಶಿಯರು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.