ADVERTISEMENT

ಡಿ.25ರಂದು ಗೌಡ ಸಂಘದ ವಾರ್ಷಿಕ ಸಮಾವೇಶ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2025, 6:39 IST
Last Updated 21 ಡಿಸೆಂಬರ್ 2025, 6:39 IST

ಪುತ್ತೂರು: ಪುತ್ತೂರಿನ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಡಿ.25ರಂದು ವಾರ್ಷಿಕ ಸಮಾವೇಶ, ಸತ್ಯನಾರಾಯಣ ಪೂಜೆ ಹಾಗೂ ತಾಲ್ಲೂಕು ಸಮಿತಿಗಳ ಪದ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪುತ್ತೂರು ತಾಲ್ಲೂಕು ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ ಯುವ ಗೌಡ ಸಂಘ, ಗೌಡ ಮಹಿಳಾ ಸಂಘ ಮತ್ತು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡುವರು. ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಶ್ರೀನಿವಾಸ್ ಎಲ್., ಮುಖಂಡ ಸಂಜೀವ ಮಠಂದೂರು, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮುಖ್ಯಪ್ರವರ್ತಕ, ವಕೀಲ ಮೋಹನ್ ಗೌಡ ಇಡ್ಯಡ್ಕ ಭಾಗಿಯಾಗವಹಿಸುವರು.

ಬೆಳಿಗ್ಗೆ 6ರಿಂದ ಗಣಪತಿ ಹವನ, 8ರಿಂದ ಸತ್ಯನಾರಾಯಣ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ, ಕುಣಿತ ಭಜನೆ, ಸಭಾ ಕಾರ್ಯಕ್ರಮದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದರು.

ADVERTISEMENT

ಸಾಧಕರಾದ ಕೆಮ್ಮಾರ ಗಂಗಾಧರ ಗೌಡ (ಕೃಷಿ), ಶಿವರಾಮ ಗೌಡ ಇಡ್ಯಪೆ (ಸಹಕಾರ), ರತ್ನಾವತಿ ಜಿ.ವಿ ಗೌಡ (ಸಾಮಾಜಿಕ), ಎ.ವಿ.ನಾರಾಯಣ ( ಶಿಕ್ಷಣ), ಧನ್ಯ ಬೈಲಾಡಿ (ಆಯುರ್ವೇದ ವೈದ್ಯಕೀಯ), ಸಚಿನ್ ಸುಂದರ ಗೌಡ ಉಪ್ಪಿನಂಗಡಿ (ಉದ್ಯಮ), ಡಾ.ಯದುರಾಜ್ (ವೈದ್ಯಕೀಯ), ಪ್ರಮೋದ್ ಕುಮಾರ್ (ಸಾಮಾಜಿಕ), ಸಿಂಚನ ಊರುಬೈಲು (ಪತ್ರಿಕೋದ್ಯಮ) ಹಾಗೂ ಗಾಂಧಾರಿ ವಿಧ್ಯಾ ಪರಿಣತೆ ಶಮಿಕಾ ಹಿರೆಬಂಡಾಡಿ ಅವರಿಗೆ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದರು.

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಒಕ್ಕಲಿಗ ಗೌಡ ಸೇವಾ ಸಂಘದ ನಿಯೋಜಿತ ಅಧ್ಯಕ್ಷ ಸುಂದರ ಗೌಡ ನಡುಬೈಲು, ನಿಯೋಜಿತ ಪ್ರಧಾನ ಕಾರ್ಯದರ್ಶಿ ಡಾ.ಶ್ರೀಧರ್ ಪಾಣತ್ತಿಲ, ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಧರ್ ಗೌಡ ಕಣಜಾಲು, ಮಹಿಳಾ ಗೌಡ ಸಂಘದ ಪ್ರಧಾನ ಕಾರ್ಯದರ್ಶಿ ಸಂಧ್ಯಾ ಶಶಿಧರ್, ಯುವ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ಗೌಡ ಸೇವಾ ಸಂಘದ ಉಪಾಧ್ಯಕ್ಷ ಪುರುಷೋತ್ತಮ ಮುಂಗ್ಲಿಮನೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.