ADVERTISEMENT

ಕಾಸರಗೋಡು: ಮತ್ತೊಂದು ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 15 ಮೇ 2020, 15:54 IST
Last Updated 15 ಮೇ 2020, 15:54 IST

ಮಂಗಳೂರು: ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಒಬ್ಬರಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು 15 ಸಕ್ರಿಯ ಪ್ರಕರಣಗಳಿವೆ.

ಅಜನೂರಿನ 39 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು, ಕುವೈತ್‌ನಿಂದ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಬಂದಿಳಿದು, ಕಲ್ಲಿಕೋಟೆ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಈ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ.

ರೋಗಲಕ್ಷಣಗಳಿದ್ದ 16 ಮಂದಿಯನ್ನು ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. 1,662 ಮಂದಿ ನಿಗಾದಲ್ಲಿದ್ದಾರೆ. 211 ಮಂದಿ ಐಸೋಲೇಷನ್ ವಾರ್ಡ್‌ನಲ್ಲಿದ್ದಾರೆ.

ADVERTISEMENT

ಸೋಂಕಿತ ಜಿಲ್ಲಾಸ್ಪತ್ರೆಗೆ ಭೇಟಿ:

ಕೋವಿಡ್‌–19 ಸೋಂಕಿತ ಪೈವಳಿಕೆಯ ಸಾಮಾಜಿಕ ಕಾರ್ಯಕರ್ತ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದು, ಈ ನಡುವೆ ಆಸ್ಪತ್ರೆಯ ಸಿಬ್ಬಂದಿಗೆ ಸೋಂಕು ತಗಲಿರುವುದು ಆತಂಕಕ್ಕೆ ಕಾರಣವಾಗಿದೆ.

ಮೂರು ಬಾರಿ ಸಾಮಾಜಿಕ ಕಾರ್ಯಕರ್ತ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದುಕೊಂಡು ಬಂದಿದ್ದು, ವೈದ್ಯರು ಹಾಗೂ ಲ್ಯಾಬ್‌ನ ಸಿಬ್ಬಂದಿಯನ್ನು ಭೇಟಿ ಮಾಡಿದ್ದಾರೆ. ಜಿಲ್ಲಾ ಆಸ್ಪತ್ರೆಯ ಕ್ಯಾನ್ಸರ್ ವಾರ್ಡ್, ಲ್ಯಾಬ್, ಎಕ್ಸ್‌ರೇ ಘಟಕಕ್ಕೆ ಭೇಟಿ ನೀಡಿದ್ದು, ಇವರಿಂದ ಆಸ್ಪತ್ರೆಯ ಇತರ ಸಿಬ್ಬಂದಿಗೂ ಸೋಂಕು ಹರಡಿರಬಹುದೇ ಎಂಬ ಆತಂಕ ಉಂಟಾಗಿದೆ. ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ಒಬ್ಬ ಶುಶ್ರೂಷಕಿ ಈಗಾಗಲೇ ಕ್ವಾರಂಟೈನ್‌ನಲ್ಲಿ ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.