ಬಂಟ್ವಾಳ: ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಗಾಯತ್ರಿ ದೇವಿ ದೇವಸ್ಥಾನದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸೋಮವಾರ ನಡೆಯಿತು.
ಬೆಳಿಗ್ಗೆ 8.30ರಿಂದ ಪಂಚಾಮೃತ ಸಹಿತ ಕಲಶಾಭಿಷೇಕ, ಮಧ್ಯಾಹ್ನ ವಿಶೇಷ ಪೂಜೆ, ಮಂತ್ರಾಕ್ಷತೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಸಂಜೆ ಭಜನೆ, ರಾತ್ರಿ ದೇವರಿಗೆ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್, ಉತ್ಸವ ಸಮಿತಿ ಮಾಜಿ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾ ಪ್ರತಿನಿಧಿ ರೇಖಾ ಪಿಲಿಂಗಾಲು, ಪಿಲಾತಬೆಟ್ಟು ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಎಂ.ಬೂಬ ಸಪಲ್ಯ ಮುಂಡಬೈಲು, ಭಜನಾ ಸಮಿತಿ ಅಧ್ಯಕ್ಷ ಜಯ ಪೂಜಾರಿ, ಅತ್ತಾವರ ಉಮಾಮಹೇಶ್ವರ ದೇವಳದ ಮೊಕ್ತೇಸರ ಜನಾರ್ದನ ಅರ್ಕುಳ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ನಾಗೇಶ ಕಲ್ಲಡ್ಕ, ಬಂಟ್ವಾಳ ಎಸ್‌ವಿಎಸ್ ಕಾಲೇಜಿನ ನಿವೃತ್ತ ಅಧೀಕ್ಷಕ ಬಿ.ಅಚ್ಯುತ ಭಂಡಾರಿಬೆಟ್ಟು, ಪುರಸಭೆ ಸದಸ್ಯ ಜಗದೀಶ ಕುಂದರ್, ನಿವೃತ್ತ ಪಿಡಿಒ ವೇದವ ಗಾಣಿಗ, ಉದ್ಯಮಿ ಭುವನೇಶ್ ಮೊಗರ್ನಾಡು, ಬಾಲಕೃಷ್ಣ ಸೆರ್ಕಳ, ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಜಯಶ್ರೀ ಅಶೋಕ್, ಪ್ರಮುಖರಾದ ಕೆ.ನಾರಾಯಣ ಸಪಲ್ಯ ಕಣ್ಣೂರು, ಕೆ.ಬಾಬು ಸಪಲ್ಯ ವಗ್ಗ, ಮೋಹನ್ ಕೆ.ಶ್ರೀಯಾನ್ ರಾಯಿ, ಜಯರಾಮ ಕುಲಾಲ್ ಉರುಡಾಯಿ, ಚಂದ್ರಶೇಖರ ಶೆಟ್ಟಿ ವಾಮದಪದವು, ಚಿದಾನಂದ ನಾಯ್ಕ್ ಪಿಲಿಂಗಾಲು, ದೇವಿಪ್ರಸಾದ್ ದೇವಂದಬೆಟ್ಟು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.