ಬಂಧನ (ಸಾಂದರ್ಭಿಕ ಚಿತ್ರ)
ಬಂಟ್ವಾಳ: ಇಲ್ಲಿನ ಮಣಿನಾಲ್ಕೂರು ಗ್ರಾಮದ ಪುಂಜೂರು ಎಂಬಲ್ಲಿ ಜುಲೈ 3ರಿಂದ 22ರ ಮಧ್ಯೆ ₹ 2.2ಲಕ್ಷ ಮೌಲ್ಯದ ಅಡಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಸುಳ್ಯ ತಾಲ್ಲೂಕಿನ ಪೈಚಾರು ನಿವಾಸಿ ಸತೀಶ್ ಎಂದು ಗುರುತಿಸಲಾಗಿದ್ದು, ಆತನಿಂದ ₹ 74ಸಾವಿರ ಮೌಲ್ಯದ 15 ಚೀಲ ಒಣ ಅಡಿಕೆ ಸಹಿತ ₹ 70 ಸಾವಿರ ನಗದು ಮತ್ತು ಕೃತ್ಯಕ್ಕೆ ಬಳಸಿದ್ದ ಗೂಡ್ಸ್ ರಿಕ್ಷಾ ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್‌ಸ್ಪೆಕ್ಟರ್ ಶಿವಕುಮಾರ್, ಪಿಎಸ್‌ಐ ಮಂಜುನಾಥ್, ಎಎಸ್‌ಐ ಜಿನ್ನಪ್ಪ ಗೌಡ ಅವರ ಪೊಲೀಸರ ತಂಡ ಕಾರ್ಯಚರಣೆ ನಡೆಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.