
ಮತ್ತೂರು: ಗ್ಯಾರಂಟಿ ಯೋಜನೆಯ ಸಂಪೂರ್ಣ ಲಾಭವನ್ನು ಪಡೆಯುತ್ತಿರುವ ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ದುಡ್ಡಿಲ್ಲದಿದ್ದರೆ ಕೋಟ್ಯಂತರ ರೂಪಾಯಿ ಅನುದಾನವನ್ನು ಮತ್ತೂರು ಕ್ಷೇತ್ರಕ್ಕೆ ತರಲು ನನಗೆ ಹೇಗೆ ಸಾಧ್ಯವಾಯಿತು ಎಂಬುವುದನ್ನು ಅವರು ತಿಳಿದುಕೊಳ್ಳಬೇಕು. ಬಿಜೆಪಿಯವರ ಸುಳ್ಳು ಹೆಚ್ಚು ದಿನ ನಡೆಯುವುದಿಲ್ಲ. ಇನ್ನಾದರೂ ಅವರು ಜನರನ್ನು ಮಂಗ ಮಾಡುವುದನ್ನು ಬಿಟ್ಟು ಬಿಡಬೇಕು ಎಂದು ಶಾಸಕ ಅಶೋಕ್‌ಕುಮಾರ್ ರೈ ಹೇಳಿದರು.
ಅರಿಯಡ್ಕ ವಲಯ ಕಾಂಗ್ರೆಸ್ ವತಿಯಿಂದ ಕೌಡಿಚ್ಚಾರಿನಲ್ಲಿ ಭಾನುವಾರ ನಡೆದ ‘ಅರಿಯಡ್ಕ ಉತ್ಸವ’ದಲ್ಲಿ ಅವರು ಮಾತನಾಡಿದರು.
ಪುತ್ತೂರಿಗೆ ಮೆಡಿಕಲ್ ಕಾಲೇಜು ಬಜೆಟ್‌ನಲ್ಲಿ ಮಂಡನೆಯಾದಾಗ ಅದು ಮಂಡನೆ ಮಾತ್ರ, ಆಗಲು ಸಾಧ್ಯವಿಲ್ಲ ಎಂದರು. ಮುಖ್ಯಮಂತ್ರಿಯವರು ಮತ್ತೂರಿಗೆ ಬಂದು ಮೆಡಿಕಲ್ ಕಾಲೇಜು ಪುತ್ತೂರಿನಲ್ಲಿಯೇ ಆಗುತ್ತದೆ ಎಂದು ಘೋಷಣೆ ಮಾಡಿದಾಗ ಅಪಸ್ವರ ಎತ್ತುತ್ತಿದ್ದವರ ಧಮ್ಮು ನಿಂತು ಹೋಗಿತ್ತು. ಇದೀಗ ಮತ್ತೆ ಟೆಂಡರ್ ಆಗಿಲ್ಲ ಎಂದು ಹೇಳುತ್ತಿದ್ದಾರೆ. ಮೆಡಿಕಲ್ ಕಾಲೇಜು ಪುತ್ತೂರಿನಲ್ಲಿ ಆಗಿಯೇ ಆಗುತ್ತದೆ. ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಕೂಡ ಆಗುತ್ತದೆ ಎಂದು ಹೇಳಿದರು.
ಅರಿಯಡ್ಕ ವಲಯ ಅರಣ್ಯ ಸಮಿತಿ ಮಾಜಿ ಅಧ್ಯಕ್ಷ ರಾಜೀವ್ ರೈ ಕುತ್ಯಾಡಿ ಉದ್ಘಾಟಿಸಿದರು. ಶಾಸಕರು ಎರಡೂವರೆ ವರ್ಷದ ಅವಧಿಯಲ್ಲಿ ಅರಿಯಡ್ಕ ಗ್ರಾಮಕ್ಕೆ ₹5 ಕೋಟಿ ಅನುದಾನ ನೀಡಿರುವ ವಿವರಗಳನ್ನೊಳಗೊಂಡ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಶಾಸಕರರು, ಐವರು ಹಿರಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್, ಪುಡಾ ಅಧ್ಯಕ್ಷ ಅಮಳ ರಾಮಚಂದ್ರ, ವಕೀಲ ಕುಂಬ್ರ ದುರ್ಗಾಪ್ರಸಾದ್ ರೈ, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ನಝೀರ್ ಮಠ, ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ ನರಿಮೊಗರು, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ ನೀರ್ಪಾಡಿ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರಹಿಮಾನ್ ಆಝಾದ್, ನೆಟ್ಟಣಿಗೆ ಮುಡ್ನೂರು ಗ್ರಾ.ಪಂ.ಉಪಾಧ್ಯಕ್ಷ ರಾಮ ಮೇನಾಲ, ಸದಸ್ಯ ಶ್ರೀರಾಮ್ ಪಕ್ಕಳ, ಬಡಗನ್ನೂರು ಗ್ರಾ.ಪಂ.ಸದಸ್ಯ ರವಿರಾಜ್ ರೈ ಸಜಂಕಾಡಿ, ಅರಿಯಡ್ಕ ಗ್ರಾ.ಪಂ.ಸದಸ್ಯ ಮೋನಪ್ಪ ಪೂಜಾರಿ ಕೆರೆಮಾರು, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನುತಾ, ಪಕ್ಷದ ಪ್ರಮುಖರಾದ ಬ್ರೀಜೇಶ್ ಶೆಟ್ಟಿ, ಸತೀಶ್ಚಂದ್ರ ರೈ ಗೋಳ್ತಿಲ, ಇಬ್ರಾಹಿಂ ಗೋಳಿಕಟ್ಟೆ ಇದ್ದರು.
ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೂತ್ ಅಧ್ಯಕ್ಷ ಬಶೀರ್ ಕೌಡಿಚ್ಚಾರ್ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.