ಉಜಿರೆ: ಕಲಾವಿದ, ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಅಧ್ಯಕ್ಷರಾಗಿದ್ದ ಜಯರಾಂ ಕೆ. (58) ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟರು.
ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಮರಣೋತ್ತರ ಪರೀಕ್ಷೆ ನಡೆಸಿ ಮುಂಡಾಜೆಯ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.
ಆರ್ಥಿಕ ಸಮಸ್ಯೆ ಹಾಗೂ ಅನಾರೋಗ್ಯದಿಂದ ನೊಂದು ಅವರ ಜಯರಾಂ ಮತ್ತು ಅವರ ತಾಯಿ ಕಲ್ಯಾಣಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕಲ್ಯಾಣಿ (96) ಅವರು ಸೋಮವಾರ ಮೃತಪಟ್ಟಿದ್ದರು. ಜಯರಾಂ ಅವರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.