ADVERTISEMENT

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಆಶ್ಲೇಷ ಬಲಿ ಸೇವೆ

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ

​ಪ್ರಜಾವಾಣಿ ವಾರ್ತೆ
Published 30 ಜುಲೈ 2023, 13:27 IST
Last Updated 30 ಜುಲೈ 2023, 13:27 IST
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿ, ಆಶ್ಲೇಷಬಲಿ ಸೇವೆ ನಡೆಸಿದರು. ಅವರೊಂದಿಗೆ ಪತ್ನಿ ರಿಷಿತಾ ಶಾ ಹಾಗೂ ಕುಟುಂಬದವರು ಇದ್ದರು.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿ, ಆಶ್ಲೇಷಬಲಿ ಸೇವೆ ನಡೆಸಿದರು. ಅವರೊಂದಿಗೆ ಪತ್ನಿ ರಿಷಿತಾ ಶಾ ಹಾಗೂ ಕುಟುಂಬದವರು ಇದ್ದರು.    

ಸುಬ್ರಹ್ಮಣ್ಯ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿ, ಆಶ್ಲೇಷಬಲಿ ಸೇವೆ ನಡೆಸಿದರು. ಅವರೊಂದಿಗೆ ಪತ್ನಿ ರಿಷಿತಾ ಶಾ ಹಾಗೂ ಕುಟುಂಬದವರು ಇದ್ದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ, ಕ್ಯಾಂಪ್ಕೊ ನಿರ್ದೇಶಕ ಕೃಷ್ಣಪ್ರಸಾದ ಮಡ್ತಿಲ ಜತೆಗಿದ್ದರು.

ದೇವಸ್ಥಾನದ ಅರ್ಚಕ ಸತ್ಯನಾರಾಯಣ ನೂರಿತ್ತಾಯ ಅವರು ಜಯ್‌ ಶಾ ಅವರನ್ನು ಗೌರವಿಸಿ ಪ್ರಸಾದ ನೀಡಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಕೇಂದ್ರ ಗೃಹ ಸಚಿವ, ತಂದೆ ಅಮಿತ್‌ ಶಾ ಅವರ ಹೆಸರಿನಲ್ಲಿ ದೇವಸ್ಥಾನದಲ್ಲಿ ನಡೆಯುವ ನಿತ್ಯ ಅನ್ನ ದಾಸೋಹಕ್ಕೆ ದೇಣಿಗೆ ನೀಡಿ ಪ್ರಸಾದ ಸ್ವೀಕರಿಸಿದರು.

ADVERTISEMENT

ದೇವಸ್ಥಾನದ ಆಡಳಿತ ಕಚೇರಿಗೆ ಭೇಟಿ ನೀಡಿದ ಜಯ್‌ ಶಾ ಅವರನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶಾಲು ಹೊದಿಸಿ ಗೌರವಿಸಿದರು. ದೇಗುಲದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ರಾವ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶೋಭಾ ಗಿರಿಧರ್, ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಎಸ್., ಮನೋಜ್ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಠಾಣಾಧಿಕಾರಿ ಮಂಜುನಾಥ್ ಟಿ. ಇದ್ದರು.

‘ದೇಶ, ವಿದೇಶಗಳಲ್ಲಿ ಪ್ರಖ್ಯಾತಿ ಪಡೆದ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ದೇವರ ದರ್ಶನ ಪಡೆದಿರುವುದರಿಂದ ಸಂತಸ ಉಂಟಾಗಿದೆ. ಮುಂದೆಯೂ ಕ್ಷೇತ್ರಕ್ಕೆ ಬಂದು ದೇವರ ದರ್ಶನ ಪಡೆಯುವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.