ADVERTISEMENT

ಧಾರ್ಮಿಕ ಕೇಂದ್ರಗಳ ಸಕ್ರಮ ಕಾಂಗ್ರೆಸ್ ಹಿಂದುತ್ವ: ಅಶೋಕ್ ರೈ 

ಅಂಕತ್ತಡ್ಕ ಬೈದರ್ಕಳ ಗರಡಿಯ ಸುತ್ತು ಗೋಪುರ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 7:39 IST
Last Updated 24 ಫೆಬ್ರುವರಿ 2026, 7:39 IST
ಕೆಯ್ಯೂರು ಗ್ರಾಮದ ಅಂಕತ್ತಡ್ಕ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ನಿರ್ಮಿಸಲಾದ ಸುತ್ತುಗೋಪುರವನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು
ಕೆಯ್ಯೂರು ಗ್ರಾಮದ ಅಂಕತ್ತಡ್ಕ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ನಿರ್ಮಿಸಲಾದ ಸುತ್ತುಗೋಪುರವನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು   

ಪುತ್ತೂರು: ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಎಲ್ಲ ಧರ್ಮಗಳ ಧಾರ್ಮಿಕ ಕೇಂದ್ರಗಳನ್ನು ಸಕ್ರಮಗೊಳಿಸಲು ಹೊಸ ಕಾನೂನು ರೂಪಿಸಿ ಸಕ್ರಮಗೊಳಿಸಲಾಗುವುದು. ಧರ್ಮ-ದೇವರ ಹೆಸರಲ್ಲಿ ಎಂದೂ ರಾಜಕೀಯ ಮಾಡದ ಕಾಂಗ್ರೆಸ್ ನೇತೃತ್ವದ ಸರ್ಕಾರ ಈ ಮೂಲಕ ಹಿಂದುತ್ವಕ್ಕೆ ದೊಡ್ಡ ಕೊಡುಗೆ ನೀಡಿದ್ದು, ಇದು ಕಾಂಗ್ರೆಸ್ ಹಿಂದುತ್ವವಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಪುತ್ತೂರು ತಾಲ್ಲೂಕಿನ ಕೆಯ್ಯೂರು ಗ್ರಾಮದ ಅಂಕತ್ತಡ್ಕ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ನಿರ್ಮಿಸಲಾದ ಸುತ್ತು ಗೋಪುರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದುತ್ವದ ಹೆಸರಿನಲ್ಲಿ ಮತ ಪಡೆದು ಅಧಿಕಾರ ಪಡೆದವರು ಈ ಕೆಲಸವನ್ನು ಮಾಡಿಲ್ಲ. ನಕಲಿ ಯಾವುದು, ಅಸಲಿ ಯಾವುದು ಎಂಬುದನ್ನು ಇನ್ನಾದರೂ ಜನರು ಅರಿತುಕೊಳ್ಳಬೇಕು ಎಂದರು.

ADVERTISEMENT

ಅಂಕತ್ತಡ್ಕ ಬ್ರಹ್ಮ ಬೈದರ್ಕಳ ಗರಡಿ ಅಧ್ಯಕ್ಷ ಕೆ.ಎಸ್.ಪದ್ಮನಾಭ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ಕೆಯ್ಯೂರು ಮಹಿಷಮರ್ದಿನಿ– ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಕೆ.ಜಯರಾಮ ರೈ, ಕೆಯ್ಯೂರು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಂತೋಷ್ ರೈ ಇಳಂತಾಜೆ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಭಾಗವಹಿಸಿದ್ದರು.

ಜಯಂತಪೂಜಾರಿ ಕೆಂಗುಡೇಲು ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣೇಶ್‌ ಭಂಡಾರಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.