
ಪ್ರಜಾವಾಣಿ ವಾರ್ತೆಪುತ್ತೂರು: ಕಾರೊಂದರಲ್ಲಿ ಬಂದ ಇಬ್ಬರು ನಡೆದುಕೊಂಡು ಹೋಗುತ್ತಿದ್ದ ತಂದೆ, ಮಗನನ್ನು ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ ಘಟನೆ ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಸಮೀಪದ ಮಣ್ಣಾಪು ಎಂಬಲ್ಲಿ ನಡೆದಿದ್ದು, ಘಟನೆ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಕೆಮ್ಮಿಂಜೆ ಗ್ರಾಮದ ಮಹಮ್ಮದ್ ಜುಬೇರ್ ಅವರು ಘಟನೆ ಕುರಿತು ದೂರು ನೀಡಿದ್ದಾರೆ. ‘ಮಾರ್ಚ್ 28ರಂದು ರಾತ್ರಿ ವೇಳೆ ನಾನು, ತಂದೆ ಆದಂ ಅವರೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ತಿಂಗಳಾಡಿಯ ಸಿದ್ದಿಕ್ ಅನ್ಸಾರ್ ಮತ್ತು ಕೆಮ್ಮಿಂಜೆ ಗ್ರಾಮದ ಶಮೀರ್ ಕಾರೊಂದರಲ್ಲಿ ಬಂದು ನಮ್ಮಿಬ್ಬರನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.