ADVERTISEMENT

ಹೋಟೆಲ್ ನಲ್ಲಿ ಯುವತಿಯ ಜೊತೆ ಕುಳಿತಿದ್ದ ಯುವಕರ‌ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2021, 5:45 IST
Last Updated 1 ಫೆಬ್ರುವರಿ 2021, 5:45 IST

ಮಂಗಳೂರು: ತನ್ನ ಗೆಳೆಯರೊಂದಿಗೆ ಯುವತಿಯೊಬ್ಬಳು ಹೋಟೆಲ್ ನಲ್ಲಿ ಕುಳಿತಿದ್ದಾಗ ಆಕೆಯ ಹಳೆ ಪರಿಚಯದ ಸ್ನೇಹಿತ ಮತ್ತು ಆತನ ಗೆಳೆಯರು ಏಕಾಏಕಿ ದಾಳಿ ಮಾಡಿದ ಘಟನೆ ಮಂಗಳೂರಿನ ಕದ್ರಿಯಲ್ಲಿ ನಡೆದಿದೆ.

ಜ.30ರಂದು ಮಧ್ಯಾಹ್ನ ಕದ್ರಿಯ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ವಿಡಿಯೊ ವೈರಲ್ ಆಗಿದೆ.

ಯುವತಿಯು ತನ್ನ ಮೂವರು ಗೆಳೆಯರೊಂದಿಗೆ ಕುಳಿತಿದ್ದಾಗ ಏಕಾಏಕಿ ನುಗ್ಗಿದ ನಾಲ್ವರು ಯುವಕರು ದಾಳಿ ನಡೆಸಿದ್ದಾರೆ. ಹೋಟೆಲ್ ನಲ್ಲಿ ಸಿಕ್ಕ ವಸ್ತುಗಳಿಂದ ಹೊಡೆದಾಟ ನಡೆಸಿದ್ದು, ಈ ವೇಳೆ ಒಬ್ಬ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಯುವತಿಯೊಂದಿಗೆ ಇದ್ದ ಯುವಕ ಚೂರಿ ಇರಿತದಿಂದ ಗಾಯಗೊಂಡಿದ್ದಾನೆ.

ADVERTISEMENT

ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನಿಖೆ ನಡೆಸಲಾಗುತ್ತಿದ್ದು, ಶೀಘ್ರದಲ್ಲಿಯೇ ಮಾಹಿತಿ ನೀಡಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.