ಪ್ರಾತಿನಿಧಿಕ ಚಿತ್ರ
ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿ ತಪ್ಪು ಮಾಡಿದ್ದಾನೆ ಎಂದು ಶಿಕ್ಷಕರೊಬ್ಬರು 3 ದಿನ ಬೆತ್ತದಿಂದ ಹೊಡೆದಿದ್ದು, ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಹಲ್ಲೆಗೆ ಒಳಗಾದ ವಿದ್ಯಾರ್ಥಿ ಬೆಳ್ತಂಗಡಿ ತಾಲ್ಲೂಕು ಉರುವಾಲು ನಿವಾಸಿ. ಹಲ್ಲೆ ನಡೆಸಿದ ಆರೋಪದ ಮೇಲೆ ಇಂಗ್ಲಿಷ್ ಶಿಕ್ಷಕ ಅನಂತ ಕುಮಾರ್ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಶಿಕ್ಷಕ ವಿದ್ಯಾರ್ಥಿಗೆ ಸೆ.9, 10, 11ರಂದು ಬೆತ್ತದಿಂದ ಹೊಡೆದ್ದರು. ಈ ವಿಚಾರವನ್ನು ವಿದ್ಯಾರ್ಥಿ ಯಾರಿಗೂ ತಿಳಿಸಿರಲಿಲ್ಲ. ನೋವು ಜಾಸ್ತಿಯಾದಾಗ ಮನೆಯವರು ವಿಚಾರಿಸಿದ್ದು, ನಡೆದ ಘಟನೆಯನ್ನು ತಿಳಿಸಿದ್ದಾನೆ. ಬಳಿಕ ಮನೆಯವರು ವಿದ್ಯಾರ್ಥಿಯನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ, ಶಿಕ್ಷಕ ಅನಂತ ಕುಮಾರ್ ವಿರುದ್ಧ ದೂರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.