ADVERTISEMENT

ಉಭಯ ಜಿಲ್ಲೆಗಳಿಗೆ 25 ಸಾವಿರ ಡೋಸ್ ಲಸಿಕೆ: ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 12:30 IST
Last Updated 6 ಜೂನ್ 2021, 12:30 IST
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಜೊತೆ ಮಾತುಕತೆ ನಡೆಸಿದರು.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಜೊತೆ ಮಾತುಕತೆ ನಡೆಸಿದರು.   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭಾನುವಾರ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರನ್ನು ಭೇಟಿಯಾಗಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹೆಚ್ಚುವರಿ ಲಸಿಕೆ ಬಿಡುಗಡೆಗೊಳಿಸುವಂತೆ ವಿನಂತಿಸಿದರು.

ಉಭಯ ಜಿಲ್ಲೆಗಳಲ್ಲಿ ಕೋವಿಡ್ ತಡೆ ಲಸಿಕೆ ಕೊರತೆ ಇದೆ. ಲಸಿಕೆ ಸರಬರಾಜು ಹೆಚ್ಚಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಕೇಂದ್ರ ಸಚಿವರು, ರಾಜ್ಯದಲ್ಲಿ ಲಸಿಕೆ ವಿತರಣೆ ಹೊಣೆಹೊತ್ತಿರುವ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಉಭಯ ಜಿಲ್ಲೆಗಳಿಗೆ 25 ಸಾವಿರ ಡೋಸ್ ಲಸಿಕೆ ಬಿಡುಗಡೆ ಮಾಡಲು ನಿರ್ದೇಶನ ನೀಡಿದ್ದಾರೆ ಎಂದು, ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT