
ಕುಂದಾಪುರ: ಸೋಮವಾರ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಮತ್ತು ಕಾರ್ಯಗಾರದ ಪೂರ್ವಭಾವಿ ಸಭೆ ನಡೆಯಿತು.
ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಎ.ಕಿರಣ್‌ಕುಮಾರ ಕೊಡ್ಗಿ, ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಜನರಿಗೆ ತಲುಪಿಸುವುದು ನಮ್ಮ ಕರ್ತವ್ಯ. ಪ್ರಧಾನಿ ನರೇಂದ್ರ ಮೋದಿಯವರ ಆತ್ಮ ನಿರ್ಭರ ಭಾರತದ ಕಲ್ಪನೆ ನಮ್ಮಲ್ಲಿ ಇರಬೇಕು. ಪ್ರತಿಯೊಬ್ಬರೂ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಹಾಗೂ ಸ್ಥಳೀಯ ಉತ್ಪನ್ನಗಳ ಬಳಕೆಗೆ ಮತ್ತು ತಯಾರಿಕೆಗೆ ಒತ್ತು ನೀಡುವ ಮೂಲಕ ಆರ್ಥಿಕ ಸದೃಢತೆ ಸಾಧಿಸಬೇಕು ಎಂದರು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರು, ಆತ್ಮನಿರ್ಭರ ಭಾರತದ ಅಭಿಯಾನದ ಕಾರ್ಯಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಮಂಡಲ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್, ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಒಬಿಸಿ ಮೋರ್ಚಾ ಅಧ್ಯಕ್ಷ, ಸುರೇಂದ್ರ ಕಾಂಚನ್ ಸಂಗಮ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಚೇತನ್ ಖಾರ್ವಿ, ಸಂಪತ್ ಶೇರಿಗಾರ್, ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ನಾಗರಾಜ್ ಆಚಾರ್ಯ ಹಂಗಳೂರು, ಅಶೋಕ್ ಪೂಜಾರಿ ಸಾಲಿಗ್ರಾಮ, ಯುವ ಮೋರ್ಚಾ, ಒಬಿಸಿ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಇದ್ದರು.
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ ಕೋಟ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.