ADVERTISEMENT

ಆತ್ಮಶಕ್ತಿ ಸಂಘದಿಂದ 500 ಸಸಿ ನಾಟಿ: ಸಂಘದಿಂದಲೇ ನಿರ್ವಹಣೆಯ ಹೊಣೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2022, 5:56 IST
Last Updated 26 ಜುಲೈ 2022, 5:56 IST
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಹೆದ್ದಾರಿ ಬದಿಯಲ್ಲಿ ಗಿಡಗಳನ್ನು ನೆಡಲಾಯಿತು
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಹೆದ್ದಾರಿ ಬದಿಯಲ್ಲಿ ಗಿಡಗಳನ್ನು ನೆಡಲಾಯಿತು   

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ದಶಮಾನೋತ್ಸವದ ಪ್ರಯುಕ್ತ ವನಮಹೋತ್ಸವವನ್ನು ಸಂಘದ ಪ್ರಧಾನ ಕಚೇರಿಯಲ್ಲಿ ಆಚರಿಸಲಾಯಿತು.

ಮಹಾನಗರ ಪಾಲಿಕೆಯ ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಸಂದೀಪ್ ಗರೋಡಿ ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿದರು. ತಾರಸಿಯಲ್ಲಿ ಭತ್ತದ ಕೃಷಿ ಮಾಡಿರುವ ಕೃಷ್ಣಪ್ಪ ಗೌಡ ಪಡ್ಡಂಬೈಲ್ ಹಾಗೂ ಪರಿಸರ ಪ್ರೇಮಿ ಮಾಧವ ಉಳ್ಳಾಲ್ ಅವರಿಗೆ ಪರಿಸರ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಹಕಾರ ಇಲಾಖೆಯ ಕಾನೂನು ಕೋಶದ ಜಂಟಿ ನಿಬಂಧಕ ಪ್ರಕಾಶ್ ರಾವ್, ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಉಪಾಧ್ಯಕ್ಷ ಕೆ.ಕೆ. ಮಹೇಂದ್ರ ಪ್ರಸಾದ್ ಗೌಡ, ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಆಶಾಲತಾ, ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ ಸಂಜೀವ ಪೂಜಾರಿ, ಅಳಪೆ ಉತ್ತರ ವಾರ್ಡ್ ಕಾರ್ಪೊರೇಟರ್ ರೂಪಶ್ರೀ, ಕಣ್ಣೂರು ವಾರ್ಡ್ ಕಾರ್ಪೊರೇಟರ್ ಚಂದ್ರಾವತಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ನಿರ್ದೇಶಕರಾದ ಜಿ. ಪರಮೇಶ್ವರ್ ಪೂಜಾರಿ, ಆನಂದ ಎಸ್.ಕೊಂಡಾಣ, ಸೀತಾರಾಮ್ ಎನ್., ರಮಾನಾಥ್ ಸನಿಲ್, ಚಂದ್ರಹಾಸ್ ಮರೋಳಿ, ಗೋಪಾಲ್ ಎಂ., ದಿವಾಕರ ಬಿ.ಪಿ., ಚಂದ್ರಾವತಿ, ಉಮಾವತಿ ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಸ್ವಾಗತಿಸಿದರು. ನಿತಿನ್ ನಿರೂಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.