ADVERTISEMENT

ಬಂಟ್ವಾಳ | ನಕಲಿ ಚಿನ್ನಾಭರಣ ಅಡವಿಡಲು ಯತ್ನ: ಇಬ್ಬರ ಸೆರೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2026, 2:51 IST
Last Updated 4 ಫೆಬ್ರುವರಿ 2026, 2:51 IST
<div class="paragraphs"><p>ಬಂಧನ</p></div>

ಬಂಧನ

   

ಬಂಟ್ವಾಳ: ಇಲ್ಲಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮಡಂತ್ಯಾರು ಎಂಬಲ್ಲಿ ಒಡಿಯೂರು ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆಯಲು ಯತ್ನಿಸಿದ ಇಬ್ಬರು ವ್ಯಕ್ತಿಗಳು ಪೊಲೀಸರ ವಶವಾಗಿದ್ದಾರೆ.

ಪುತ್ತೂರು ಕಬಕ ಕಲ್ಲಂದಡ್ಕ ನಿವಾಸಿ ಅಬ್ದುಲ್ ನಝೀರ್, ಕಲ್ಲಡ್ಕ ಸಮೀಪದ ಬೋಳಂತೂರು ಬೀರುಕೋಡಿ ನಿವಾಸಿ ಪ್ರಮೋದ್ ಶೆಟ್ಟಿಗಾರ್ ಬಂಧಿತ ಆರೋಪಿಗಳು.

ADVERTISEMENT

ಇವರಿಬ್ಬರು ಫೆ.2ರಂದು ಬೆಳಿಗ್ಗೆ 11 ಗಂಟೆಗೆ ಮೂರು ನಕಲಿ ಚಿನ್ನದ ಸರ ಅಡಿವಿಟ್ಟು ಸಾಲ ಪಡೆಯಲು ಮಡಂತ್ಯಾರು ಶಾಖೆಗೆ ಬಂದಿದ್ದು, ಚಿನ್ನ ಪರಿಶೀಲನೆ ನಡೆಸಿದಾಗ ಅದು ನಕಲಿ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ಶಾಖಾಧಿಕಾರಿ ಅಶ್ವಿತಾ ಅವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.