ಅಪಘಾತ
–ಪ್ರಾತಿನಿಧಿಕ ಚಿತ್ರ
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ಮಂಗಳವಾರ ತಡ ರಾತ್ರಿ ರಿಕ್ಷಾ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್‌ನಲ್ಲಿದ್ದ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಗಣೇಶ್ ಪ್ರಸಾದ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಲೀಸ್ ಠಾಣೆಯಿಂದ ಇಳಂತಿಲದ ಪೆದಮಲೆ ಎಂಬಲ್ಲಿರುವ ತಮ್ಮ ಮನೆಗೆ ಬರುತ್ತಿರುವಾಗ ಎದುರಿನಿಂದ ವೇಗವಾಗಿ ಬಂದ ಆಪೆ ರಿಕ್ಷಾ ಡಿಕ್ಕಿ ಹೊಡೆದಿದೆ. ಸ್ಥಳೀಯರು ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.