
ನೆಲ್ಯಾಡಿ (ಉಪ್ಪಿನಂಗಡಿ): ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ, ನೆಲ್ಯಾಡಿ ಸೇಂಟ್ ಜಾರ್ಜ್ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಪದವಿಪೂರ್ವ ಕಾಲೇಜು ಬಾಲಕ, ಬಾಲಕಿಯರ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಶನಿವಾರ ನೆಲ್ಯಾಡಿಯಲ್ಲಿ ನಡೆಯಿತು.
ಎರಡೂ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ಪ್ರಶಸ್ತಿ ಗೆದ್ದುಕೊಂಡಿತು. ವಿವಿಧ ಕಾಲೇಜುಗಳ 60 ಬಾಲಕರು, 30 ಬಾಲಕಿಯರು ಭಾಗವಹಿಸಿದ್ದರು. ಬಾಲಕರ ವಿಭಾಗದಲ್ಲಿ ಉಜಿರೆ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಬಾಲಕಿಯರ ವಿಭಾಗದಲ್ಲಿ ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿಪೂರ್ವ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದವು.
ಬಾಲಕರ ವೈಯಕ್ತಿಕ ವಿಭಾಗದಲ್ಲಿ ಉಜಿರೆ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ದರ್ಶನ್ ಪ್ರಥಮ, ಆಳ್ವಾಸ್ ಕಾಲೇಜಿನ ಸಾಗರ್ ದ್ವಿತೀಯ, ವರುಣ್ ಎಚ್.ಎಲ್. ತೃತೀಯ ಸ್ಥಾನ ಪಡೆದರು. ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ನಾಗಿಣಿ ಪ್ರಥಮ, ಚರಿಷ್ಮಾ ದ್ವಿತೀಯ, ಗಾನ್ವಿ ತೃತೀಯ ಸ್ಥಾನ ಪಡೆದರು.
ಬಾಲಕರ ವಿಭಾಗದ ಓಟಕ್ಕೆ ನೋಡಲ್ ಅಧಿಕಾರಿ ಕುಶಾಲಪ್ಪ ಗೌಡ, ಬಾಲಕಿಯರ ವಿಭಾಗದಕ್ಕೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್ ಚಾಲನೆ ನೀಡಿದರು. ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ ಶೆಟ್ಟಿ, ಸೇಂಟ್ ಜಾರ್ಜ್ ಶಿಕ್ಷಣ ಸಂಸ್ಥೆಯ ಕುರಿಯಾಕೋಸ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.