ADVERTISEMENT

ಮಂಗಳೂರು: ಕೋಟ್ಯಾನ್ ಪಡು, ಬೊಳ್ಳಜಿರಗೆ ಪ.ಗೋ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2020, 14:24 IST
Last Updated 29 ಡಿಸೆಂಬರ್ 2020, 14:24 IST
ಬೊಳ್ಳಜಿರ ಬಿ.ಅಯ್ಯಪ್ಪ
ಬೊಳ್ಳಜಿರ ಬಿ.ಅಯ್ಯಪ್ಪ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ 2019ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಪಡು ಮತ್ತು ಬೊಳ್ಳಜಿರ ಬಿ.ಅಯ್ಯಪ್ಪ ಆಯ್ಕೆಯಾಗಿದ್ದಾರೆ.

ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ತುಕಾರಾಂ ಪೂಜಾರಿ, ಮಂಗಳೂರು ರಥಬೀದಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಜಯಶ್ರೀ ಬಿ.ಕದ್ರಿ ಮತ್ತು ಯಕ್ಷಗಾನ ತಜ್ಞ ಕದ್ರಿ ನವನೀತ ಶೆಟ್ಟಿ ಒಳಗೊಂಡ ಸಮಿತಿಯು ಆಯ್ಕೆ ಮಾಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಡಿ.31ರಂದು ಬೆಳಿಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಶಸ್ತಿ ಪ್ರದಾನ ಮಾಡುವರು. ಮೇಯರ್ ದಿವಾಕರ್, ಡಿಸಿಪಿ ವಿನಯ ಗಾಂವಕರ್ ಮತ್ತುಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪಾಲ್ಗೊಳ್ಳುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.