ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಕೊಡಮಾಡುವ 2024ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಬೆಂಗಳೂರಿನ ಮಕ್ಸೂದ್ ಅಹ್ಮದ್ ಮೂಲ್ಕಿ (ಭಾಷೆ ಮತ್ತು ಸಂಘಟನೆ), ಕವಿ ಮತ್ತು ಬರಹಗಾರ ಹೈದರ್ ಅಲಿ ಕಾಟಿಪಳ್ಳ (ಸಾಹಿತ್ಯ) ಹಾಗೂ ಬ್ಯಾರಿ ಗಾಯಕ, ಕವಿ ಪಿ.ಎಂ. ಹಸನಬ್ಬ ಮೂಡುಬಿದಿರೆ (ಸಂಸ್ಕೃತಿ ಮತ್ತು ಕಲೆ) ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ತಲಾ ₹50 ಸಾವಿರ ನಗದು, ಫಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಆ. 10ರಂದು ಮೈಸೂರಿನಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.