ADVERTISEMENT

76ನೇ ಸ್ವಾತಂತ್ರ್ಯೋತ್ಸವ: ಮಂಗಳೂರಿನಲ್ಲಿ ಸಚಿವ ಸುನಿಲ್‌ ಕುಮಾರ್‌ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 4:06 IST
Last Updated 15 ಆಗಸ್ಟ್ 2022, 4:06 IST
ಮಂಗಳೂರು ನಗರದ ನೆಹರು ಮೈದಾನದಲ್ಲಿ ಸಚಿವ ವಿ.ಸುನಿಲ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು. 
ಮಂಗಳೂರು ನಗರದ ನೆಹರು ಮೈದಾನದಲ್ಲಿ ಸಚಿವ ವಿ.ಸುನಿಲ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.    

ಮಂಗಳೂರು: 76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ನೆಹರು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT