
ಪ್ರಜಾವಾಣಿ ವಾರ್ತೆಕಾರ್ಕಳ: ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ತಿಳಿಸಿದ್ದಾರೆ.
‘ಚನ್ನಗಿರಿಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿ
ನಲ್ಲಿ ನಮಾಜ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರ ‘ಬಿ’ ರಿಪೋರ್ಟ್ ಸಲ್ಲಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಪರಾಧ ಕೃತ್ಯ, ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ, ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳುವುದು ತಪ್ಪು ಎಂಬಂತಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.