ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಯನ್ನುಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ ರೈ ಅವರಿಗೆ ಪ್ರದಾನ ಮಾಡಲಾಯಿತು.
ಪ್ರಶಸ್ತಿಯೊಂದಿಗೆ ನೀಡಿರುವ ₹ 1ಲಕ್ಷ ನಗದನ್ನು ಶಾಲೆಗೆ ದೇಣಿಗೆ ನೀಡುವುದಾಗಿ ಅವರು ಘೋಷಿಸಿದರು.
‘1952ರಿಂದ 60ರವರೆಗೆ ಪ್ರಾಥಮಿಕ ಶಿಕ್ಷಣ ಪಡೆದ ಬಂಟ್ವಾಳ ತಾಲ್ಲೂಕಿನ ಪುಣಚಾ ಗ್ರಾಮದ ಪರಿಯಾಲ್ತಡ್ಕ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಶಸ್ತಿಯ ಮೊತ್ತವನ್ನು ನೀಡಲು ನಿರ್ಧರಿಸಿದ್ದೇನೆ. ವಿದ್ಯಾರ್ಥಿಗಳಿಗೆ ಸಮವಸ್ತ್ರ, ಲೇಖನ ಸಾಮಗ್ರಿ, ಅತಿಥಿ ಶಿಕ್ಷಕರಿಗೆ ಗೌರವ ಧನ ಸೇರಿದಂತೆ ಅಗತ್ಯ ಸೌಲಭ್ಯಗಳಿಗೆ ಮಾತ್ರ ದೇಣಿಗೆಯನ್ನು ಬಳಸುವಂತೆ ಷರತ್ತು ವಿಧಿಸಿ ನೀಡುತ್ತೇನೆ’ ಎಂದರು.
‘ಪರಿಯಾಲ್ತಡ್ಕ ಕನ್ನಡ ಮಾಧ್ಯಮ ಶಾಲೆಯು ಅನುದಾನ ಹಾಗೂ ಶಿಕ್ಷಕರ ಕೊರತೆಯಿಂದ ನರಳುತ್ತಿದೆ. ಪ್ರಶಸ್ತಿಯ ಹಣದಿಂದ ಪರಿಸ್ಥಿತಿ ಸ್ವಲ್ಪ ಸುಧಾರಿಸುವ ವಿಶ್ವಾಸದಿಂದ ದೇಣಿಗೆ ನೀಡುತ್ತಿದ್ದೇನೆ’ ಎಂದು ಡಾ.ಬಿ.ಎ.ವಿವೇಕ ರೈ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.