ತಾಯಿಯ ಎದೆ ಹಾಲು ಕುಡಿಯುತ್ತಿರುವ ಮಗು– ಸಾಂದರ್ಭಿಕ ಚಿತ್ರ
ಕಾಸರಗೋಡು: ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮಗು ಮೃತಪಟ್ಟ ಘಟನೆ ಮಂಗಳವಾರ ಬಂಬ್ರಾಣದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಅಬ್ದುಲ್ ಅಝೀಝ್-ಖದೀಜಾ ದಂಪತಿ ಪುತ್ರಿ, ಎರಡೂವರೆ ತಿಂಗಳ ಹಸುಳೆ ಮೃತಪಟ್ಟಿದೆ. ಮಲಗಿಕೊಂಡು ಎದೆಹಾಲು ಕುಡಿಯುತ್ತಿದ್ದ ಮಗು ಎಷ್ಟು ಹೊತ್ತಾದರೂ ಎಚ್ಚರಗೊಳ್ಳದೆ ಇದ್ದಾಗ ಕುಂಬಳೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅದಾಗಲೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಕುಂಬಳೆ ಪೊಲೀಸರು ಮಹಜರು ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.