ADVERTISEMENT

ದಕ್ಷಿಣ ಕನ್ನಡ: ಆನೆಗಳ ಗುಂಪಿನಿಂದ ಬೇರ್ಪಟ್ಟ ಮರಿಯನ್ನು ಕಟ್ಟಿ ಹಾಕಿದ ಗ್ರಾಮಸ್ಥರು

​ಪ್ರಜಾವಾಣಿ ವಾರ್ತೆ
Published 19 ಜನವರಿ 2024, 12:38 IST
Last Updated 19 ಜನವರಿ 2024, 12:38 IST
abhilash sd.
   abhilash sd.

ಸುಳ್ಯ (ದಕ್ಷಿಣ ಕನ್ನಡ): ಆನೆಗಳ ಗುಂಪುನಿಂದ ಬೇರ್ಪಟ್ಟು ತಾಲ್ಲೂಕಿನ ಮಂಡೆಕೋಲು ಜನವಸತಿ ಪ್ರದೇಶದಲ್ಲಿ ಒಂಟಿಯಾಗಿ ಉಳಿದುಕೊಂಡಿದ್ದ ಮರಿಯೊಂದನ್ನು ಗ್ರಾಮಸ್ಥರು ಕಟ್ಟಿ ಹಾಕಿದ್ದಾರೆ.

ಶುಕ್ರವಾರ ಬೆಳಿಗ್ಗೆ ಈ ಮರಿ ಆನೆ ಮಂಡೆಕೋಲಿನ ಕನ್ಯಾನ ಎಂಬಲ್ಲಿ ಇರುವುದು ಪತ್ತೆಯಾಗಿದೆ. ರಾತ್ರಿ ವೇಳೆ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳ ಗುಂಪಿನಿಂದ ಇದು ತಪ್ಪಿಸಿಕೊಂಡು ಬೇರ್ಪಟ್ಟಿರಬಹುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಮರಿ ಆನೆಯನ್ನು ಆನೆಗಳ ಗುಂಪಿನೊಂದಿಗೆ ಸೇರಿಸಲು ಅರಣ್ಯ ಇಲಾಖೆಯವರು ಮುಂದಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.