ಬಂಟ್ವಾಳ ತಾಲ್ಲೂಕಿನ ಬಡಗಬೆಳ್ಳೂರು ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನೂತನ ಗರ್ಭಗುಡಿ ನಿರ್ಮಾಣಕ್ಕೆ ಗುರುವಾರ ಶಿಲಾನ್ಯಾಸ ನೆರವೇರಿತು
ಬಂಟ್ವಾಳ: ಇಲ್ಲಿನ ಬಡಗಬೆಳ್ಳೂರು ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನೂತನ ಗರ್ಭಗುಡಿ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ವಿಷ್ಣುಮೂರ್ತಿ ತಂತ್ರಿ ಎಡಪದವು ಮತ್ತು ವಾಸ್ತುಶಿಲ್ಪಿ ಮಹೇಶ್ ಮುನಿಯಂಗಳ ಅವರ ಮಾರ್ಗದರ್ಶನದಲ್ಲಿ ನೆರವೇರಿತು.
ಪೊಳಲಿ ರಾಮಕೃಷ್ಣ ತಪೋವನದ ವಿವೇಕ ಚೈತನ್ಯಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಅಧ್ಯಕ್ಷತೆ ವಹಿಸಿದ್ದರು.
ಮಾಜಿ ಸಚಿವ ಬಿ.ರಮಾನಾಥ ರೈ, ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ರಘು ಎಲ್.ಶೆಟ್ಟಿ ಮಾತನಾಡಿದರು.
ಬಡಗಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾಶ್ರೀ ನಾರಾಯಣ ನಾಯ್ಕ್, ಬೂಡಾ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉದ್ಯಮಿ ಉಮೇಶ್ ಸಾಲ್ಯಾನ್ ಬೆಂಜನಪದವು, ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ದೇವಪ್ಪ ಪೂಜಾರಿ ಬಾಳಿಕೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಅಮ್ಮುಂಜೆ, ಕೃಷ್ಣಪ್ರಸಾದ್ ರೈ ಬೆಳ್ಳೂರುಗುತ್ತು, ಬೆಂಜನಪದವು ಭದ್ರಕಾಳಿ ಕ್ಷೇತ್ರದ ಧರ್ಮದರ್ಶಿ ರಮೇಶ್, ಕ್ಷೇತ್ರದ ಟ್ರಸ್ಟಿ ಸಂದೀಪ್ ಕುಮಾರ್, ಅರ್ಚಕ ರಮೇಶ್ ಪೂಜಾರಿ ಭಾಗವಹಿಸಿದ್ದರು.
ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಪಲ್ಲಿಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಶಿಕಿರಣ್ ಪೂಜಾರಿ ಬೆಳ್ಳೂರು ಸ್ವಾಗತಿಸಿ, ವಂದಿಸಿದರು. ದಿನೇಶ್ ವರಕೋಡಿ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.