ADVERTISEMENT

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕಮಿಷನರೇಟ್ ವ್ಯಾಪ್ತಿಯಲ್ಲಿ ಹಲವರ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 16:03 IST
Last Updated 28 ಜುಲೈ 2022, 16:03 IST
ಪ್ರವೀಣ್ ನೆಟ್ಟಾರು
ಪ್ರವೀಣ್ ನೆಟ್ಟಾರು   

ಮಂಗಳೂರು: ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರದಲ್ಲಿ ಹಲವರನ್ನು ವಶಕ್ಕೆ ಪಡೆದ ಪೊಲೀಸರು, ವಿಚಾರಣೆಗೆ ಒಳಪಡಿಸಿದ್ದಾರೆ.

ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೂಚನೆಯಂತೆ ಜಿಲ್ಲಾ ಪೊಲೀಸರ ಸಹಭಾಗಿತ್ವದಲ್ಲಿ, ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರು ಹಾಗೂ ತನಿಖೆಗೊಳಪಡಿಸಬೇಕಾದ ವ್ಯಕ್ತಿಗಳ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ ಸುಮಾರು 27 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT