ಮಂಗಳೂರು: ಪ್ರವಾದಿ ಇಬ್ರಾಹಿಂದ ಮತ್ತು ಅವರ ಪುತ್ರ ಇಸ್ಮಾಯಿಲ್ ಅವರ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇದೇ 31ರ ಶುಕ್ರವಾರ ಕರಾವಳಿಯಲ್ಲಿ ಆಚರಿಸಲಾಗುವುದು ಎಂದು ಖಾಝಿಗಳಾದ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಬೇಕಲ ಇಬ್ರಾಹಿಂ ಮುಸ್ಲಿಯಾರ್ ಪ್ರತ್ಯೇಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳವಾರ ಅಸ್ತಮಿಸಿದ ಬುಧವಾರ ರಾತ್ರಿ ದುಲ್ಹಜ್ ಪ್ರಥಮ ಚಂದ್ರ ದರ್ಶನವಾಗಿದೆ. ಅದರಂತೆ ಇದೇ 31ರಂದು ಬಕ್ರೀದ್ ಆಚರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.