ADVERTISEMENT

ಹಿಜಾಬ್ ನಿಷೇಧ ವಾಪಾಸ್: ಬಿಜೆಪಿ ಖಂಡನೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2023, 7:14 IST
Last Updated 24 ಡಿಸೆಂಬರ್ 2023, 7:14 IST

ಮಂಗಳೂರು: ಹಿಜಾಬ್ ನಿಷೇಧ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಎಂ. ಖಂಡಿಸಿದ್ದಾರೆ.

‘ಮುಸ್ಲಿಂ ರಾಷ್ಟ್ರಗಳಲ್ಲಿ ಹಿಜಾಬ್ ಜಾರಿಯಲ್ಲಿಲ್ಲ. ಆದರೂ ಇಲ್ಲಿ ಕೆಲ ಮತಾಂಧ ಸಂಘಟನೆಗಳು ಕೋಮು ಪ್ರಚೋದನೆಗಾಗಿ  ಹಿಜಾಬ್ ಪ್ರಕರಣವನ್ನು ಹುಟ್ಟುಹಾಕಿವೆ.  ಆದರೆ ಇದನ್ನೆಲ್ಲ ಲೆಕ್ಕಿಸದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಓಲೈಕೆಗೋಸ್ಕರ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ. 

‘ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಸಮಾನತೆ ಇರಬೇಕೆಂಬ ಉದ್ದೇಶದಿಂದ ಸಮವಸ್ತ್ರ ನೀತಿ ಜಾರಿಯಲ್ಲಿದೆ. ಈ ನೀತಿಗೆ ಅನುಗುಣವಾಗಿ ರಾಜ್ಯದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರ ಹಿಜಾಬ್ ನಿಷೇಧ ಮಾಡಿತ್ತು. ಈ ಕ್ರಮವನ್ನು ಹೈಕೋರ್ಟ್ ಮಾನ್ಯ ಮಾಡಿದೆ. ಸಮವಸ್ತ್ರ ನೀತಿಯನ್ನು ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.