ADVERTISEMENT

ಪ್ರಮೋದ್ ಮುತಾಲಿಕ್ ಗೆ ನಿಷೇಧ: ಸರ್ಕಾರದ ಷಂಡತನದ ಪ್ರತೀಕ- ತಿಮರೋಡಿ

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 7:03 IST
Last Updated 29 ಜುಲೈ 2022, 7:03 IST

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಅವರಿಗೆ ನಿಷೇಧ ಹೇರಿರುವುದು ಸರ್ಕಾರದ ಷಂಡತನದ ಪ್ರತೀಕ ಎಂದು ರಾಷ್ಟ್ರೀಯ ಹಿಂದೂ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ತಿಮರೊಡಿ ಟೀಕಿಸಿದರು.

ಪ್ರವೀಣ್ ನೆಟ್ಟಾರು ಅವರ ಮನೆಗೆ ಶುಕ್ರವಾರ ಭೇಟಿ ನೀಡಿದ ಅವರು ಬಂಧುಗಳಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳ ಬರುವ ಮುತಾಲಿಕ್ ಅವರಿಗೆ ನಿಷೇಧ ಹೇರುವುದು ಖಂಡನೀಯ. ಪ್ರವೀಣ್ ಹತ್ಯೆಗೆ ಬಿಜೆಪಿ ಸರ್ಕಾರವೇ ಕಾರಣ. ಇದರ ರಾಜಕೀಯ ಲಾಭ ಪಡೆಯಲು ಬಿಜೆಪಿ ಹವಣಿಸುತ್ತಿದೆ' ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT