ಬಂಟ್ವಾಳ: ಸ್ವಸಹಾಯ ಗುಂಪುಗಳ ರಚನೆ ಮೂಲಕ ಜಿಲ್ಲೆಯ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿದ್ದಾರೆ. ಇದಕ್ಕೆ ಸಹಕಾರ ಸಂಘಗಳು ಮುಖ್ಯ ಕಾರಣ ಎಂದು ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಬಂಟ್ವಾಳ ಸಮಾಜ ಸೇವಾ ಸಹಕಾರ ಸಂಘದ ವತಿಯಿಂದ ದೇರಳಕಟ್ಟೆಯಲ್ಲಿ ಆರಂಭಗೊಂಡ 16ನೇ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.
ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ನೂತನ ಶಾಖೆ ಉದ್ಘಾಟಿಸಿದರು.
ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು.
ಬೆಳ್ಮ ಗ್ರಾಮ ಪಂಚಾಯತಿ ಅಧ್ಯಕ್ಷೆ ರಜಿಯಾ ಕಂಪ್ಯೂಟರ್ ವಿಭಾಗ ಉದ್ಘಾಟಿಸಿದರು. ಗ್ರಾ.ಪಂ ಸದಸ್ಯೆ ರಮ್ಲತ್ ಭದ್ರತಾ ಕೊಠಡಿ ಉದ್ಘಾಟಿಸಿದರು.
ಕೊಲ್ಯ ಕುಂಭೇಶ್ವರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಗೋಪಾಲ ಕಣ್ವತೀರ್ಥ ಠೇವಣಿ ಪತ್ರ ಬಿಡುಗಡೆ ಮಾಡಿದರು.
ದೇರಳಕಟ್ಟೆ ರತ್ನ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಅಯ್ಯಪ್ಪ ಸ್ವಾಮಿ ದೇವಸ್ಥಾನ ಆಡಳಿತ ಮೊಕ್ತೇಸರ ಚಂದ್ರಹಾಸ ಅಡ್ಯಂತಾಯ, ಕಂಪ ದೈವದ ಮೂಲ್ಯಣ್ಣ ಕೆ.ಬಾಲಕೃಷ್ಣ ಸಾಲಿಯಾನ್, ಗ್ರಾ.ಪಂ ಸದಸ್ಯ ಇಕ್ಬಾಲ್ ಎಚ್.ಆರ್., ಉದ್ಯಮಿ ರವಿರಾಜ್ ಶೆಟ್ಟಿ, ಕಟ್ಟಡ ಮಾಲೀಕರಾದ ವೀಣಾ ಮಾತನಾಡಿದರು.
ಸಂಘದ ನಿರ್ದೇಶಕರಾದ ವಿಶ್ವನಾಥ ಕೆ.ಬಿ., ರಮೇಶ್ ಸಾಲ್ಯಾನ್, ಅರುಣ್ ಕುಮಾರ್, ಜನಾರ್ದನ ಬೊಂಡಾಲ, ಎಂ.ವಾಮನ ಟೈಲರ್, ಬಿ.ರಮೇಶ್ ಸಾಲ್ಯಾನ್, ಸುರೇಶ್ ಎನ್., ವಿ.ವಿಜಯಕುಮಾರ್, ಜಗನ್ನಿವಾಸ ಗೌಡ, ಎಂ.ಕೆ.ಗಣೇಶ ಸಮಗಾರ, ಜಯಂತಿ, ವಿದ್ಯಾ, ಶಾಖಾ ವ್ಯವಸ್ಥಾಪಕಿ ನಳಿನಿ ಭಾಗವಹಿಸಿದ್ದರು.
ಸಂಘದ ಉಪಾಧ್ಯಕ್ಷ ಪದ್ಮನಾಭ ವಿ.ಸ್ವಾಗತಿಸಿ, ಪ್ರಧಾನ ವ್ಯವಸ್ಥಾಪಕ ಭೋಜ ಮೂಲ್ಯ ಪ್ರಾಸ್ತವಿಕವಾಗಿ ಮಾತನಾಡಿದರು. ಸಹಾಯಕ ಪ್ರಧಾನ ವ್ಯವಸ್ಥಾಪಕ ಮೋಹನ್ ಎಂ.ಕೆ. ವರದಿ ವಾಚಿಸಿದರು. ಸತೀಶ್ ಪಲ್ಲಮಜಲು ವಂದಿಸಿದರು. ಶಿವರಾಮ ಮರ್ತಾಜೆ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.