ಬೆಳ್ತಂಗಡಿ: ಪಿಲಿಗೂಡು ಬಾರ್ಯಾ ಬನ್ನೆಂಗಳದಲ್ಲಿ ನಿರ್ಮಾಣವಾಗುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡಕ್ಕೆ ಧರ್ಮಸ್ಥಳದಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ನೀಡಿದ ₹ 2 ಲಕ್ಷ ಅನುದಾನದ ಮಂಜೂರಾತಿ ಪತ್ರವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಹಸ್ತಾಂತರಿಸಿದರು.
ತಾಲ್ಲೂಕು ಜನಜಾಗೃತಿ ಕಾರ್ಯಕಾರಿಣಿ ಸಮಿತಿ ಸದಸ್ಯ, ಬನ್ನೆಂಗಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗುಣಕರ್ ಅಗ್ನಾಡಿ, ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ಬಾರ್ಯ ಗುರುವಾಯನಕೆರೆ, ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ, ಸೇವಾಪ್ರತಿನಿಧಿ ವಿಶಾಲಾಕ್ಷಿ, ಒಕ್ಕೂಟದ ಅಧ್ಯಕ್ಷ ಮೋಹನ್ ಗೌಡ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.