ADVERTISEMENT

ಮಂಗಳೂರು| ಸುರತ್ಕಲ್ ಸಂಘದ ಒಗ್ಗಟ್ಟು ಮಾದರಿ: ಅಜಿತ್ ಕುಮಾರ್ ರೈ ಮಾಲಾಡಿ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 6:17 IST
Last Updated 13 ಜನವರಿ 2026, 6:17 IST
ಸುರತ್ಕಲ್‌ನಲ್ಲಿ ನಡೆದ ಬಂಟರ ಕ್ರೀಡೋತ್ಸವದಲ್ಲಿ ಪಿ.ವಿ. ಶೆಟ್ಟಿ ಮಾತನಾಡಿದರು 
ಸುರತ್ಕಲ್‌ನಲ್ಲಿ ನಡೆದ ಬಂಟರ ಕ್ರೀಡೋತ್ಸವದಲ್ಲಿ ಪಿ.ವಿ. ಶೆಟ್ಟಿ ಮಾತನಾಡಿದರು    

ಮಂಗಳೂರು: ಸುರತ್ಕಲ್ ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಬಂಟರ ಕ್ರೀಡೋತ್ಸವವು ಸುರತ್ಕಲ್ ಗೋವಿಂದ ದಾಸ್ ಕಾಲೇಜ್ ಮೈದಾನದಲ್ಲಿ ಜರುಗಿತು.

ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಉದ್ಘಾಟಿಸಿದರು.

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷ ಪಿ.ವಿ.ಶೆಟ್ಟಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು, ‘ಕ್ರೀಡೆಯಷ್ಟೇ ಶಿಕ್ಷಣವೂ ಮುಖ್ಯ. ಮಕ್ಕಳು ಕ್ರೀಡೆಗೆ ಮಾತ್ರ ಮಹತ್ವ ಕೊಟ್ಟರೆ ಸಾಲದು. ಕ್ರೀಡಾ ಕ್ಷೇತ್ರದಲ್ಲಿ ಏನಾದರೂ ಸಾಧನೆ ಮಾಡಲು ಅನಾನುಕೂಲಗಳಿದ್ದರೆ ನನ್ನನ್ನು ಸಂಪರ್ಕಿಸಿ. ನಿಮ್ಮ ಜೊತೆಗೆ ನಾನಿದ್ದೇನೆ’ ಎಂದರು.

ADVERTISEMENT

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ, ಸುರತ್ಕಲ್ ಬಂಟರ ಸಂಘ ನಿರಂತರವಾಗಿ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡು ಕ್ರಿಯಾಶೀಲ ಸಂಘಟನೆಯಾಗಿ ಬೆಳೆದಿದೆ. ಸಂಘದ ಒಗ್ಗಟ್ಟು, ಕಾರ್ಯ ಸಾಧನೆ ಇತರ ಸಂಘಗಳಿಗೆ ಮಾದರಿ ಎಂದರು.

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಸ್ಥಾಪಕಾಧ್ಯಕ್ಷ ರೋಹಿತಾಕ್ಷ ರೈ ಕುಳಾಯಿಗುತ್ತು, ಮಾಜಿ ಅಧ್ಯಕ್ಷರಾದ ದೇವಾನಂದ ಎಂ.ಶೆಟ್ಟಿ, ಉಲ್ಲಾಸ್ ಆರ್. ಶೆಟ್ಟಿ, ಸುಧಾಕರ್ ಎಸ್. ಪೂಂಜ, ನಿಕಟಪೂರ್ವ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಉಪಾಧ್ಯಕ್ಷ ಪ್ರವೀಣ್ ಪಿ.ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಸರೋಜ ಟಿ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಮಧ್ಯ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಸಾಂಸ್ಕೃತಿಕ ಕಾರ್ಯದರ್ಶಿ ದೇವೇಂದ್ರ ಶೆಟ್ಟಿ, ಜೊತೆ ಕಾರ್ಯದರ್ಶಿ ಮೀರಾವಾಣಿ ಎಂ ಶೆಟ್ಟಿ, ಮಹಿಳಾ ವಿಭಾಗದ ಕ್ರೀಡಾ ಕಾರ್ಯದರ್ಶಿ ಬಬಿತ ಶೆಟ್ಟಿ ಉಪಸ್ಥಿತರಿದ್ದರು.

ಅಂತರರಾಷ್ಟ್ರೀಯ ಕಬಡ್ಡಿ ಪಟು ಧನಲಕ್ಷ್ಮಿ ಪೂಜಾರಿ ಪಾಲಕರನ್ನು ಸನ್ಮಾನಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಸ್ವಾಗತಿಸಿದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.