ADVERTISEMENT

ಬಂಟ್ವಾಳ: ಕ್ಷೇತ್ರ ಬಿಜೆಪಿ ಕಾರ್ಯಕಾರಿಣಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2025, 14:02 IST
Last Updated 20 ಜೂನ್ 2025, 14:02 IST
<div class="paragraphs"><p>ಬಿಜೆಪಿ</p></div>

ಬಿಜೆಪಿ

   

ಬಂಟ್ವಾಳ: ರಾಜ್ಯದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಜನಸಾಮಾನ್ಯರಿಗೆ ದುಪ್ಪಟ್ಟು ತೆರಿಗೆ ಮತ್ತು ಅಗತ್ಯ ವಸ್ತುಗಳಿಗೆ ದರ ಏರಿಕೆ ಖಂಡಿಸಿ ಜೂನ್‌ 23ರಂದು ಪ್ರತಿ ಗ್ರಾಮ ಪಂಚಾಯಿತಿ ಮುಂಭಾಗ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ತಿಳಿಸಿದರು.

ಇಲ್ಲಿನ ಬಿ.ಸಿ.ರೋಡಿನಲ್ಲಿ ನಡೆದ ಕ್ಷೇತ್ರ ಬಿಜೆಪಿ ಕಾರ್ಯಕಾರಿಣಿ ಮತ್ತು ವಿಕಸಿತ ಭಾರತ ಸಂಕಲ್ಪ ಸಭೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ADVERTISEMENT

ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿದರು. ಬಿಜೆಪಿ ಕ್ಷೇತ್ರಾಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು, ಪ್ರತಾಪಸಿಂಹ ನಾಯಕ್, ಪ್ರಮುಖರಾದ ಕೆ.ಪದ್ಮನಾಭ ಕೊಟ್ಟಾರಿ, ಪ್ರೇಮಾನಂದ ಶೆಟ್ಟಿ, ಪೂಜಾ ಪೈ, ಹರೀಶ್ ಕಂಜಿಪಿಲಿ, ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ರಾಕೇಶ್ ರೈ ಕಡೆಂಜಿ, ರೂಪಾ, ನಿತೇಶ್, ಮೋಹನ್ ಪಿ. ಎಸ್., ವಿಜಯ ರೈ, ವಸಂತ ಕುಮಾರ್ ಅಣ್ಣಳಿಕೆ, ಬಾಲಕೃಷ್ಣ ಸೆರ್ಕಳ, ಪ್ರಭಾಕರ ಪ್ರಭು ಭಾಗವಹಿಸಿದ್ದರು. ಸುದರ್ಶನ ಬಜ ಸ್ವಾಗತಿಸಿ, ಶಿವಪ್ರಸಾದ್ ಶೆಟ್ಟಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.