
ವಿಟ್ಲ: ಬಂಟ್ವಾಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2026–28ನೇ ಸಾಲಿನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೋಮವಾರ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉದ್ಘಾಟಿಸಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಅಧ್ಯಕ್ಷತೆ ವಹಿಸಿದ್ದರು.
ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಸಿ.ಮಾತನಾಡಿ, ಜನರಿಗೆ ಸತ್ಯ ವಿಚಾರಗಳನ್ನು ತಲುಪಿಸುವ ಕಾರ್ಯವನ್ನು ಪತ್ರಕರ್ತರು ಪ್ರಾಮಾಣಿಕ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ ಎಂದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ.ಪೂಜಾರಿ, ಕಾರ್ಯಕಾರಿ ಸಮಿತಿ ಸದಸ್ಯ ಸಂದೀಪ್ ಸಾಲ್ಯಾನ್ ಭಾಗವಹಿಸಿದ್ದರು.
ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಜತೆಗೆ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಲಿ ವಿಟ್ಲ, ಕೋಶಾಧಿಕಾರಿ ಚಂದ್ರಶೇಖರ ಕಲ್ಮಲೆ, ಉಪಾಧ್ಯಕ್ಷ ವಿಷ್ಣುಗುಪ್ತ ಪುಣಚ, ಜತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ತಲಪಾಡಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ವೆಂಕಟೇಶ್ ಬಂಟ್ವಾಳ, ರತ್ನದೇವ್ ಪುಂಜಾಲಕಟ್ಟೆ, ಉದಯಶಂಕರ ನೀರ್ಪಾಜೆ, ವಾಮನ ಪೂಜಾರಿ ಪೊಳಲಿ ಹಾಗೂ ಮೌನೇಶ್ ವಿಶ್ವಕರ್ಮ ಅಧಿಕಾರ ವಹಿಸಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.